ಕಾಂಗ್ರೆಸ್ ಸರ್ಕಾರದಿಂದ ಬಡವರಿಗೆ 1 ಲಕ್ಷ ಕೋಟಿ: ಡಿಕೆ ಶಿವಕುಮಾರ್

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ಕಾಂಗ್ರೆಸ್ ಸರ್ಕಾರದ ವಿವಿಧ ಜನಪರ ಯೋಜನೆಗಳ ಮೂಲಕ ಬಡವರ ಜೇಬಿಗೆ 1 ಲಕ್ಷ ಕೋಟಿ ರೂಪಾಯಿಗಳನ್ನು ತಲುಪಿಸಲಾಗುತ್ತಿದೆ ಎಂದು ಹೇಳಿದ್ದಾರೆ.
dk shivakumar congress

ಕರ್ನಾಟಕದ ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಕಾಂಗ್ರೆಸ್ ಸರ್ಕಾರದ ವಿವಿಧ ಜನಪರ ಯೋಜನೆಗಳ ಮೂಲಕ ಬಡವರ ಜೇಬಿಗೆ 1 ಲಕ್ಷ ಕೋಟಿ ರೂಪಾಯಿಗಳನ್ನು ತಲುಪಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರ ಜನ್ಮದಿನಾಚರಣೆಯ ಸಂದರ್ಭದಲ್ಲಿ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.

ಡಿಕೆಶಿ ಅವರು, ಕಾಂಗ್ರೆಸ್‌ನ ಈ ಕಾರ್ಯಕ್ರಮಗಳಲ್ಲಿ ಬಿಜೆಪಿ ಅಥವಾ ಜೆಡಿಎಸ್‌ನ ಯಾವುದೇ ಕೊಡುಗೆ ಇಲ್ಲ ಎಂದು ಟೀಕಿಸಿದರು. ರಾಜೀವ್ ಗಾಂಧಿ ಅವರ ಕಾಲದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಪಡಿಸಲಾಯಿತು ಎಂದು ಸ್ಮರಿಸಿದ ಅವರು, ತಾವು ಶಾಸಕರಾಗಿದ್ದಾಗ ಜೆ.ಹೆಚ್. ಪಟೇಲ್ ಕಾಲದಲ್ಲಿ ಪಂಚಾಯತ್‌ಗಳಿಗೆ 1 ಲಕ್ಷ ರೂಪಾಯಿ ಅನುದಾನ ನೀಡಲಾಗುತ್ತಿತ್ತು. ಕೃಷ್ಣ ಅವರ ಆಡಳಿತದಲ್ಲಿ ಇದನ್ನು 5 ಲಕ್ಷಕ್ಕೆ ಏರಿಕೆ ಮಾಡಲಾಯಿತು ಮತ್ತು 27 ಇಲಾಖೆಗಳನ್ನು ಪಂಚಾಯತ್‌ಗೆ ಸೇರಿಸಿ ಗ್ರಾಮೀಣ ಆಡಳಿತವನ್ನು ಬಲಗೊಳಿಸಲಾಯಿತು ಎಂದು ತಿಳಿಸಿದರು.

ಇದನ್ನೂ ಓದಿ | ಸಿಎಜಿ ವರದಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳಾದ ಗೃಹ ಜ್ಯೋತಿ, ಅನ್ನ ಭಾಗ್ಯ, ಶಕ್ತಿ, ಯುವ ನಿಧಿ ಮತ್ತು ಗೃಹ ಲಕ್ಷ್ಮಿ ಯೋಜನೆಗಳು ರಾಜ್ಯದ ಜನರಿಗೆ ಆರ್ಥಿಕ ಭದ್ರತೆಯನ್ನು ಒದಗಿಸಿವೆ ಎಂದು ಶಿವಕುಮಾರ್ ಹೇಳಿದರು. ಈ ಯೋಜನೆಗಳು ಕಾಂಗ್ರೆಸ್‌ನ ಸಾಮಾಜಿಕ ಕಲ್ಯಾಣದ ಬದ್ಧತೆಯನ್ನು ಪ್ರತಿಬಿಂಬಿಸುತ್ತವೆ ಎಂದು ಹೇಳಿದರು. ರಾಜೀವ್ ಗಾಂಧಿಯವರ ದೂರದರ್ಶನ ಯೋಜನೆ ಮತ್ತು ದೇವರಾಜ್ ಅರಸುರ ಭೂ ಸುಧಾರಣೆಯಂತಹ ಕಾರ್ಯಕ್ರಮಗಳು ದೇಶದ ಸಾಮಾಜಿಕ-ಆರ್ಥಿಕ ರಚನೆಯನ್ನು ಬದಲಾಯಿಸಿವೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು. ಕಾಂಗ್ರೆಸ್‌ನ ಈ ಕೊಡುಗೆಗಳನ್ನು ಜನರಿಗೆ ಮುಂದುವರೆಸಿ ತಲುಪಿಸುವಂತೆ ಕಾರ್ಯಕರ್ತರಿಗೆ ಅವರು ಕರೆ ನೀಡಿದರು.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »