ಕನ್ನಡ ಚಿತ್ರರಂಗದ ನಟಿ ರನ್ಯಾ ರಾವ್ ಚಿನ್ನದ ಕಳ್ಳಸಾಗಾಣಿಕೆ ಪ್ರಕರಣದಲ್ಲಿ 102 ಕೋಟಿ ರೂ. ದಂಡ ಪಾವತಿಸುವಂತೆ ಆದಾಯ ಗುಪ್ತಚರ ನಿರ್ದೇಶನಾಲಯದ (DRI) ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕಸ್ಟಮ್ಸ್ ಇಲಾಖೆ ತನಿಖೆ ನಡೆಸುತ್ತಿವೆ. ಮಾರ್ಚ್ 2025ರಲ್ಲಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ರನ್ಯಾ 14.2 ಕೆಜಿ ಚಿನ್ನ ಕಳ್ಳಸಾಗಾಣಿಕೆ ಮಾಡುತ್ತಿರುವಾಗ ಡಿಆರ್ಐ ಅಧಿಕಾರಿಗಳ ಕೈಯಲ್ಲಿ ಸಿಕ್ಕಿಬಿದ್ದಿದ್ದರು. ಚಿನ್ನದ ಮೌಲ್ಯ 12.56 ಕೋಟಿ ರೂ.
ತನಿಖೆಯಲ್ಲಿ ರನ್ಯಾ, ತಾರುಣ್ ಕೊಂಡೂರು ರಾಜು ಜೊತೆಗೆ ದುಬೈ, ಉಗಾಂಡಾದಿಂದ ಚಿನ್ನ ಖರೀದಿಸಿ, ಹವಾಲಾ ಮೂಲಕ ಪಾವತಿಸುತ್ತಿದ್ದರು ಎಂದು ಬಹಿರಂಗವಾಗಿದೆ. ರನ್ಯಾರ ನಿವಾಸದಿಂದ 2.67 ಕೋಟಿ ನಗದು, 2.06 ಕೋಟಿ ಮೌಲ್ಯದ ಚಿನ್ನಾಭರಣಗಳು ವಶವಾಗಿವೆ. 34.12 ಕೋಟಿ ಆಸ್ತಿಗಳನ್ನು ಇಡಿ ಜಪ್ತಿ ಮಾಡಿದೆ. ಒಟ್ಟು ಒಂದು ವರ್ಷದಲ್ಲಿ 127ಕೆಜಿ ಚಿನ್ನ ಬೆಂಗಳೂರಿಗೆ ತಂದಿದ್ದಾರೆ.
ಇದನ್ನೂ ಓದಿ | ಜರಾಂಗೆಗೆ 3 ಗಂಟೆಯೊಳಗೆ ಆಜಾದ್ ಮೈದಾನ ಖಾಲಿಗೆ ಬಾಂಬೆ HC ಆದೇಶ
ನಟಿ ರನ್ಯಾ ರಾವ್ ಅವರಿಗೆ ಕಾಫಿಫೋಸಾ ಅಡಿಯಲ್ಲಿ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದ್ದು, ಜಾಮೀನು ಪಡೆಯುವ ಅವಕಾಶವೇ ಇಲ್ಲದಂತಾಗಿದೆ. ಇನ್ನು ರನ್ಯಾ ವಿರುದ್ಧ ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆ ಕಾಯ್ದೆಯನ್ನು (COFEPOSA) ಜಾರಿ ಮಾಡಲಾಗಿದ್ದು, ಈ ವಿಷಯವನ್ನು ನಿರ್ವಹಿಸುವ ಸಲಹಾ ಮಂಡಳಿಯು ಇತ್ತೀಚೆಗೆ ರನ್ಯಾ ರಾವ್ ಗೆ ಬಂಧನದ ಸಂಪೂರ್ಣ ಅವಧಿಯಲ್ಲಿ ಜಾಮೀನು ಸಿಗುವುದಿಲ್ಲ.







