ಉತ್ತರ ಕರ್ನಾಟಕದಲ್ಲಿ ಬೆಳೆ ಹಾನಿ: ಪರಿಹಾರಕ್ಕಾಗಿ ಖರ್ಗೆ ಮೋದಿಗೆ ಪತ್ರ!

ಕಲ್ಯಾಣ ಕರ್ನಾಟಕದ ಭಾಗಗಳಲ್ಲಿ ಸುರಿದ ಭಾರಿ ಮಳೆಗೆ ಪ್ರವಾಹ ಸ್ಥಿತಿ ಉಂಟಾಗಿದೆ. ಇದರಿಂದಾಗಿ ರೈತರು ಭಾರಿ ನಷ್ಟ ಅನುಭವಿಸುತ್ತಿದ್ದಾರೆ. ಹೆಸರು, ಜೋಳ, ತೊಗರಿ,  ಸೇರಿದಂತೆ ಎಲ್ಲಾ ಬೆಳೆಗಳು ನಾಶಗೊಂಡಿವೆ.
Kalyana Karnataka floods  

ಕಲ್ಯಾಣ ಕರ್ನಾಟಕದ ಭಾಗಗಳಲ್ಲಿ ಸುರಿದ ಭಾರಿ ಮಳೆಗೆ ಪ್ರವಾಹ ಸ್ಥಿತಿ ಉಂಟಾಗಿದೆ. ಇದರಿಂದಾಗಿ ರೈತರು ಭಾರಿ ನಷ್ಟ ಅನುಭವಿಸುತ್ತಿದ್ದಾರೆ. ಹೆಸರು, ಜೋಳ, ತೊಗರಿ,  ಸೇರಿದಂತೆ ಎಲ್ಲಾ ಬೆಳೆಗಳು ನಾಶಗೊಂಡಿವೆ. ಈ ಹಿನ್ನೆಲೆಯಲ್ಲಿ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಬೆಳೆ ಹಾನಿ ಪರಿಹಾರಕ್ಕಾಗಿ ಪತ್ರ ಬರೆಯುವುದಾಗಿ ಸೋಮವಾರ ತಿಳಿಸಿದ್ದಾರೆ.  

ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ವಿಜಯಪುರ, ಯಾದಗಿರಿ, ಬಾಗಲಕೋಟ್‌ ಜಿಲ್ಲೆಗಳಲ್ಲಿ ಪ್ರವಾಹದ ಸ್ಥಿತಿ ಹೆಚ್ಚಾಗಿದ್ದು, ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಭಾರಿ ನೀರು ಹೊರಕ್ಕೆ ಬಿಟ್ಟ ಕಾರಣ ಕೃಷ್ಣಾ ಮತ್ತು ಭೀಮಾ ನದಿಗಳು ಉಕ್ಕಿ ಹರಿಯುತ್ತಿದೆ. ಇದರಿಂದಾಗಿ ಲಕ್ಷಾಂತರ ಎಕರೆ ಜಮೀನುಗಳು ಜಲವೃತ್ತವಾಗಿವೆ. ರಾಜ್ಯಾದ್ಯಂತ 8.60 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಬೆಳೆ ಹಾನಿ ಸಂಭವಿಸಿದೆ.  

ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ ಅವರು, “ಪ್ರವಾಹದಿಂದಾಗಿ ಭಾರಿ ನಷ್ಟ ಉಂಟಾಗಿದೆ. ಬೆಳೆ ಹಾನಿ ವರದಿ ಬಂದ ನಂತರ ಪ್ರಧಾನಮಂತ್ರಿಗಳಿಗೆ ಸವಿಸ್ತಾರವಾದ ಪತ್ರ ಬರೆಯುತ್ತೇನೆ. ರೈತರಿಗೆ ತಕ್ಷಣ ಪರಿಹಾರ ನೀಡಬೇಕು ಎಂದು ಕೇಳುತ್ತೇನೆ” ಎಂದು ಹೇಳಿದರು. ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಹ ಸಂಪರ್ಕಿಸಿ, “ಸ್ಥಳ ಪರಿಶೀಲನೆ ನಡೆಸಿ ಆದಷ್ಟು ಬೇಗ ರೈತರಿಗೆ ಸಹಾಯ ಮಾಡಿ. ಮುತುವರ್ಜಿ ವಹಿಸಿ ಪರಿಹಾರ ವಿತರಣೆ ಮಾಡಿ” ಎಂದು ಮನವಿ ಮಾಡಿದ್ದಾರೆ.  

ಇದನ್ನೂ ಓದಿ | ಜಾತಿ ಗಣತಿ ಬಹಿಷ್ಕರಿಸಿದ ಬಿಜೆಪಿ: ಸಿದ್ಧರಾಮಯ್ಯ ತಿರುಗೇಟು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಭೇಟಿ ನೀಡಿ ಪರಿಸ್ಥಿತಿ ವಿಶ್ಲೇಷಿಸಲಿದ್ದಾರೆ.   ಸರ್ಕಾರಿ ಅಧಿಕಾರಿಗಳು ಈಗಾಗಲೇ ರಕ್ಷಣಾ ಕಾರ್ಯಗಳನ್ನು ನಡೆಸುತ್ತಿದ್ದಾರೆ. ಕಲಬುರಗಿಯಲ್ಲಿ ಹಲವು ಕುಟುಂಬಗಳಿಗೆ ಆಹಾರ ಮತ್ತು ವಸತಿ ಒದಗಿಸಲಾಗುತ್ತಿದೆ. ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಬಿ. ಖಂಡ್ರೆ ಅವರು “ತ್ವರಿತ ರಿಲೀಫ್ ಮತ್ತು ಬೆಳೆ ಪರಿಹಾರ ನೀಡುತ್ತೇವೆ” ಎಂದು ಭರವಸೆ ನೀಡಿದ್ದಾರೆ.  

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »