ಆಸ್ಟ್ರೇಲಿಯಾ ಪ್ರವಾಸಕ್ಕೆ ತಂಡ ಪ್ರಕಟ: ODI ತಂಡಕ್ಕೆ ಗಿಲ್‌ ನಾಯಕ, RO-KO ವಾಪಸ್‌!

ಬಿಸಿಸಿಐ ಶನಿವಾರ ಆಸ್ಟ್ರೇಲಿಯಾ ಪ್ರವಾಸಕ್ಕಾಗಿ ಏಕದಿನ ಮತ್ತು ಟಿ20 ಸರಣಿಗೆ ತಂಡವನ್ನು ಪ್ರಕಟಿಸಿದ್ದು, ಶುಭ್‌ಮನ್ ಗಿಲ್‌ ಏಕದಿನ ಕ್ರಿಕೆಟ್‌ನ ನಾಯಕನಾಗಿ ಆಯ್ಕೆ.
india squad australia

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶನಿವಾರ (ಅಕ್ಟೋಬರ್ 4) ಆಸ್ಟ್ರೇಲಿಯಾ ಪ್ರವಾಸಕ್ಕಾಗಿ ಏಕದಿನ ಮತ್ತು ಟಿ20 ಸರಣಿಗೆ ತಂಡವನ್ನು ಪ್ರಕಟಿಸಿದ್ದು, ಟೆಸ್ಟ್ ಕ್ರಿಕೆಟ್‌ನ ನಾಯಕ ಶುಭ್‌ಮನ್ ಗಿಲ್ ಅವರನ್ನು ಏಕದಿನ ಕ್ರಿಕೆಟ್‌ನ ನಾಯಕರಾಗಿ ಆಯ್ಕೆ ಮಾಡಲಾಗಿದೆ. 

ಈ ಸರಣಿಯು ಮೂರು ಪಂದ್ಯಗಳ ಏಕದಿನ ಸರಣಿ ಮತ್ತು ಐದು ಪಂದ್ಯಗಳ ಟಿ20 ಸರಣಿಯನ್ನು ಒಳಗೊಂಡಿದ್ದು, ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿದೆ. ಈ ಆಯ್ಕೆಯು ಭಾರತೀಯ ಕ್ರಿಕೆಟ್‌ನ ಹೊಸ ಯುಗದ ಆರಂಭವೆಂದು ಕ್ರೀಡಾ ಜಗತ್ತು ಹೇಳುತ್ತಿದೆ.

ರೋಹಿತ್ ಶರ್ಮಾ ಅವರನ್ನು ಏಕದಿನ ನಾಯಕತ್ವದಿಂದ ಕೆಳಗಿಳಿಸಿ, 26 ವರ್ಷದ ಗಿಲ್ ಅವರನ್ನು ಏಕದಿನ ನಾಯಕರಾಗಿ ನೇತೃತ್ವ ನೀಡಲಾಗಿದ್ದು, ಶ್ರೇಯಸ್ ಅಯ್ಯರ್ ಅವರನ್ನು ಉಪನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೋಹ್ಲಿ ಅವರಂತಹ ಅನುಭವಿ ಆಟಗಾರರು ತಂಡದಲ್ಲಿ ಸೇರಿದ್ದಾರೆ, ಆದರೆ ಹಾರ್ದಿಕ್ ಪಾಂಡ್ಯಾ ಅವರು ಆಯ್ಕೆಯಾಗಿಲ್ಲ.

ಏಕದಿನ ತಂಡ: ಶುಭ್‌ಮನ್ ಗಿಲ್ (ನಾಯಕ), ಶ್ರೇಯಸ್ ಅಯ್ಯರ್ (ಉಪನಾಯಕ), ರೋಹಿತ್ ಶರ್ಮಾ, ವಿರಾಟ್ ಕೋಹ್ಲಿ ,ಕೆ.ಎಲ್‌.ರಾಹುಲ್‌, ದ್ರುವ್‌ ಜುರೆಲ್‌,ನಿತೀಶ್‌ ಕುಮಾರ್‌ ರೆಡ್ಡಿ,ವಾಶಿಂಗ್‌ಟನ್‌ ಸುಂದರ್‌, ಕುಲ್‌ದೀಪ್ ಯಾದವ್, ಅಕ್ಷರ್ ಪಟೇಲ್, ಹರ್ಶಿತ್‌ ರಾಣಾ, ಮುಹಮ್ಮದ್ ಸಿರಾಜ್, ಅರ್ಶದೀಪ್‌ ಸಿಂಗ್‌, ಪ್ರಸಿದ್ಧ ಕೃಷ್ಣ, ಯಶಸ್ವಿ ಜೈಸ್ವಾಲ್‌.

ಇದನ್ನೂ ಓದಿ | ನಾರ್ವೆ ವಿಶ್ವ ಚಾಂಪಿಯನ್‌ಶಿಪ್‌: ಮೀರಾಬಾಯಿ ಚಾನುಗೆ ಬೆಳ್ಳಿ ಪದಕ

ಟಿ20 ಸರಣಿಗೆ ಸೂರ್ಯಕುಮಾರ್ ಯಾದವ್ ಅವರ ನಾಯಕತ್ವದಲ್ಲಿ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭ್‌ಮನ್ ಗಿಲ್ (ಉಪನಾಯಕ), ಅಭಿಷೇಕ್ ಶರ್ಮಾ, ಏಷ್ಯಾಕಪ್ ಫೈನಲ್ ಹೀರೋ ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಸರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರಣ್ ಚಕ್ರವರ್ತಿ, ಜಸ್ ಪ್ರೀತ್ ಬುಮ್ರಾ, ಅರ್ಶ್ ದೀಪ್ ಸಿಂಗ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಸಂಜು ಸ್ಯಾಮ್ಸನ್, ರಿಂಕು ಸಿಂಗ್ ಮತ್ತು ವಾಷಿಂಗ್ಟನ್ ಸುಂದರ್ ಟಿ20 ತಂಡದಲ್ಲಿದ್ದಾರೆ.

Share:

ಮತ್ತಷ್ಟು ಸುದ್ದಿ

ಪಾಂಡವಪುರದಲ್ಲಿ ಜೂನ್ 1 ರಿಂದ ‘ಸಾವಯವ ರೈತರ ಸಂತೆ’ ಆರಂಭ

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಜೈವಿಕ ಕ್ರಾಂತಿಯ ಮುನ್ನುಡಿ! ಮಂಡ್ಯ: ಹೈನುಗಾರಿಕೆ ಮತ್ತು ಕಬ್ಬಿನ ಬೆಳೆಯ ಮೂಲಕ ರಾಜ್ಯದ

ಮುಂದೆ ಓದಿ »