ಸಿದ್ದರಾಮಯ್ಯರ ಔತಣಕೂಟ ರಹಸ್ಯ: ಸಂಪುಟ ಪುನರ್‌ಚನೆಯ ಸುಳಿವು!

ಸಿದ್ದರಾಮಯ್ಯ ಅವರ ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಅವರು ತಮ್ಮ ಅಧಿಕೃತ ನಿವಾಸದಲ್ಲಿ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟ ಆಯೋಜಿಸಿದ್ದರು.
siddaramaiah cabinet reshuffle
ಚಿತ್ರ ಕೃಪೆ : ಕನ್ನಡ ಪ್ರಭ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ, ಅಕ್ಟೋಬರ್ 13ರ ಸೋಮವಾರ ರಾತ್ರಿ ಅವರು ತಮ್ಮ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟ ಆಯೋಜಿಸಿದ್ದರು. 

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಸಚಿವರು ಭಾಗವಹಿಸಿದ್ದರು, ಆದರೆ ಶಿವಕುಮಾರ್ ಬೇಗನೆ ಹೊರಟುಹೋದರು. ಔತಣದ ನಂತರ ಸಿದ್ದರಾಮಯ್ಯ ಅವರು ಸಚಿವರೊಂದಿಗೆ ಸಮೂಹ ಚರ್ಚೆ ಮತ್ತು ಏಕಾಂತ ಮಾತುಕತೆ ನಡೆಸಿದರು.

ಈ ಸಭೆಯಲ್ಲಿ ಸಂಪುಟ ಪುನಾರಚನೆ ಕುರಿತು ಸುಳಿವು ನೀಡಿದ ಸಿದ್ದರಾಮಯ್ಯ, ಕಾಂಗ್ರೆಸ್ ಹೈಕಮಾಂಡ್‌ ನಾಯಕತ್ವದಿಂದ ಅನುಮೋದನೆ ಬಂದರೆ ಪುನಾರಚನೆ ನಡೆಯುತ್ತದೆ ಎಂದು ಹೇಳಿದರು. ಸಚಿವರು ತಮ್ಮ ಸ್ಥಾನಗಳನ್ನು ತ್ಯಾಗ ಮಾಡಲು ಸಿದ್ಧರಿರಬೇಕು ಮತ್ತು ಪಕ್ಷದ ಸಂಘಟನಾ ಕೆಲಸದಲ್ಲಿ ತೊಡಗಿಕೊಳ್ಳಬೇಕು ಎಂದು ಸೂಚಿಸಿದರು. 

ಸುಮಾರು 10ರಿಂದ 12ಸಚಿವರನ್ನು ಕೈಬಿಟ್ಟು ಹೊಸ ಮುಖಗಳನ್ನ ಅವಕಾಶ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಇದು ಬಿಹಾರ ವಿಧಾನಸಭಾ ಚುನಾವಣೆಯ ನಂತರ ನವೆಂಬರ್‌ನಲ್ಲಿ ನಡೆಯಬಹುದು ಎಂಬ ಅಂದಾಜಿಸಲಾಗಿದೆ. ಸಿದ್ದರಾಮಯ್ಯ ಅವರು ಸಚಿವರನ್ನು ಪ್ರಜಾಪರ ಕೆಲಸಕ್ಕೆ ಒತ್ತು ನೀಡುವಂತೆ ಸೂಚಿಸಿದರು ಮತ್ತು ಇಲಾಖೆಗಳಲ್ಲಿ ಸುಧಾರಣೆ ತರಬೇಕು ಎಂದು ಹೇಳಿದರು.

ಔತಣದಲ್ಲಿ ಬಿಬಿಎಂಪಿ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗಳು, ಆರ್‌ಎಸ್‌ಎಸ್ ಚಟುವಟಿಕೆಗಳ ನಿಷೇಧ, ಜಾತಿ ಗಣತಿ, ಬಿಹಾರ ಚುನಾವಣೆಯಲ್ಲಿ ಪಕ್ಷದ ಕೆಲಸ ಮುಂತಾದ ವಿಷಯಗಳು ಚರ್ಚೆಯಾದವು. ರಾಜ್ಯ ಗುತ್ತಿಗೆದಾರರ ಸಂಘದಿಂದ ಬಂದ ಪತ್ರದ ಬಗ್ಗೆಯೂ ಮಾತನಾಡಿದ ಸಿದ್ದರಾಮಯ್ಯ, ಸಂಬಂಧಪಟ್ಟ ಸಚಿವರಿಗೆ ಸಮಸ್ಯೆಗಳನ್ನು ಬಗೆಹರಿಸುವಂತೆ ಸೂಚಿಸಿದರು.

ಇದನ್ನೂ ಓದಿ | “ಗ್ಯಾರಂಟಿ ಯೋಜನೆಗಳು ರಾಜ್ಯದ ಆರ್ಥಿಕತೆಗೆ ದೊಡ್ಡ ಹೊರೆ”: ದೇಶಪಾಂಡೆ

ಆದರೆ ಮಾಧ್ಯಮಗಳ ಮುಂದೆ ಮಾತನಾಡಿದ ಸಿದ್ದರಾಮಯ್ಯ, ಔತಣಕೂಟಕ್ಕೆ ಸಂಪುಟ ಪುನಾರಚನೆಯೊಂದಿಗೆ ಸಂಬಂಧವಿಲ್ಲ ಎಂದು ಹೇಳಿದರು. ಇದು ಸಾಮಾನ್ಯ ಭೋಜನ ಮಾತ್ರ ಎಂದು ತಿಳಿಸಿದರು.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »