ಬಾಕ್ಸ್ ಆಫೀಸ್‌ನಲ್ಲಿ ‘ಲ್ಯಾಂಡ್​ಲಾರ್ಡ್’ ಅಬ್ಬರ: ಜಮೀನ್ದಾರನ ದರ್ಪಕ್ಕೆ ಸೆಡ್ಡು ಹೊಡೆದ ರಾಚಯ್ಯ!

ದುನಿಯಾ ವಿಜಯ್ ಮತ್ತು ರಾಜ್ ಬಿ. ಶೆಟ್ಟಿ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಲ್ಯಾಂಡ್​ಲಾರ್ಡ್’ (Landlord) ಇಂದು ರಾಜ್ಯಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಿದೆ.
landlord kannada movie

ಸ್ಯಾಂಡಲ್‌ವುಡ್‌ನ ‘ಸಲಗ’ ದುನಿಯಾ ವಿಜಯ್ ಮತ್ತು ‘ಮಂಗಳೂರು’ ಪ್ರತಿಭೆ ರಾಜ್ ಬಿ. ಶೆಟ್ಟಿ ಮೊದಲ ಬಾರಿಗೆ ತೆರೆ ಹಂಚಿಕೊಂಡಿರುವ ಬಹುನಿರೀಕ್ಷಿತ ಸಿನಿಮಾ ‘ಲ್ಯಾಂಡ್​ಲಾರ್ಡ್’ (Landlord) ಇಂದು ರಾಜ್ಯಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಿದೆ. ‘ಕಾಟೇರ’ ಖ್ಯಾತಿಯ ಜಡೇಶ್ ಕೆ. ಹಂಪಿ ನಿರ್ದೇಶನದ ಈ ಚಿತ್ರ, ಕೇವಲ ಆ್ಯಕ್ಷನ್ ಮಾತ್ರವಲ್ಲದೆ ಸಾಮಾಜಿಕ ನ್ಯಾಯದ ಪರವಾಗಿ ಧ್ವನಿ ಎತ್ತಿದೆ.

ಭೂಮಿ ಮತ್ತು ಬದುಕಿನ ಸಂಘರ್ಷ

ಸಿನಿಮಾ 1980ರ ದಶಕದ ಗ್ರಾಮೀಣ ಕರ್ನಾಟಕದ ಹಿನ್ನೆಲೆಯಲ್ಲಿ ಸಾಗುತ್ತದೆ. ಊರಿನ ಕ್ರೂರ ಭೂಮಾಲೀಕ ಚಿಕ್ಕೆಜಮಾನ್ರ (ರಾಜ್ ಬಿ. ಶೆಟ್ಟಿ) ಜೀತದಾಳುಗಳ ಮೇಲಿನ ದರ್ಪ ಹಾಗೂ ಅದನ್ನೇ ವಿರೋಧಿಸಿ ನಿಲ್ಲುವ ನಾಯಕ ರಾಚಯ್ಯನ (ದುನಿಯಾ ವಿಜಯ್) ನಡುವಿನ ಸಂಘರ್ಷವೇ ಚಿತ್ರದ ಜೀವಾಳ. ನಾಯಕನ ಮಗಳು ಭಾಗ್ಯ (ರಿತನ್ಯಾ ವಿಜಯ್) ಪೊಲೀಸ್ ಕಾನ್ಸ್‌ಟೇಬಲ್ ಆಗಿ ಊರಿಗೆ ಬಂದಾಗ ಕಥೆಗೆ ಹೊಸ ತಿರುವು ಸಿಗುತ್ತದೆ.

ಇದನ್ನೂ ಓದಿ | ಬಿಗ್ ಬಾಸ್ ಕನ್ನಡ ಸೀಸನ್ 12 ಫಿನಾಲೆ: ಗಿಲ್ಲಿ ನಟಗೆ ಒಲಿದ ಬಿಗ್ ಬಾಸ್ ಪಟ್ಟ!

ದುನಿಯಾ ವಿಜಯ್ ತಮ್ಮ ಎಂದಿನಂತೆಯೆ ಖದರ್ರಾಗಿ ಮಿಂಚಿದ್ದರೆ, ವಿಲನ್ ಪಾತ್ರದಲ್ಲಿ ರಾಜ್ ಬಿ. ಶೆಟ್ಟಿ ಅವರ ಕ್ರೌರ್ಯ ನೋಡುಗರನ್ನು ಬೆಚ್ಚಿಬೀಳಿಸುತ್ತದೆ. ಅಜನೀಶ್ ಲೋಕನಾಥ್ ಅವರ ಹಿನ್ನೆಲೆ ಸಂಗೀತ ಮತ್ತು ಸ್ವಾಮಿ ಜೆ. ಗೌಡ ಅವರ ಛಾಯಾಗ್ರಹಣ 80ರ ದಶಕದ ಹಳ್ಳಿಯ ವಾತಾವರಣವನ್ನು ಕಣ್ಣಿಗೆ ಕಟ್ಟುವಂತೆ ಮೂಡಿಸಿವೆ.

Share:

ಮತ್ತಷ್ಟು ಸುದ್ದಿ

ಪಾಂಡವಪುರದ ಕ್ಯಾತನಹಳ್ಳಿಯಲ್ಲಿ ರಾಜ್ಯಮಟ್ಟದ ‘ಅಧಿಕ ಹಾಲು ಕರೆಯುವ ಸ್ಪರ್ಧೆ’

ಶಾಸಕ ದರ್ಶನ್ ಪುಟ್ಟಣ್ಣಯ್ಯ ಹುಟ್ಟುಹಬ್ಬ ಮಂಡ್ಯ: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ಜನ್ಮದಿನದ ಪ್ರಯುಕ್ತ ಮಂಡ್ಯ

ಸಾವಯವ ಉತ್ಪನ್ನಗಳ ಗ್ರಾಹಕರೇ ಬೆಂಗಳೂರಿನ ಲಾಲ್‌ ಬಾಗ್‌ ಗೆ ಬನ್ನಿ

ಜೈವಿಕ ಕೃಷಿಕ ಸೊಸೈಟಿ (ರಿ)ಯಿಂದ ಕೃಷಿ ಉತ್ಪನ್ನಗಳ ನೇರ ಮಾರುಕಟ್ಟೆ  ಬೆಂಗಳೂರು: ಜೈವಿಕ ಕೃಷಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಜೈವಿಕ

ಮುಂದೆ ಓದಿ »

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್.ಪಾಟೀಲ್‌ ರಾಜೀನಾಮೆ

ಬೆಂಗಳೂರು: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ದಿನಾಂಕ 05.06.2026ರಂದು ರಾಜೀನಾಮೆ ಸಲ್ಲಿಸಿದ್ದೇನೆ ಎಂದು

ಮುಂದೆ ಓದಿ »

ರೈತರ ತೆಂಗಿನ ತೋಟಗಳಿಗೆ ಆಸರೆಯಾದ ಪುಟ್ಟಣ್ಣಯ್ಯ ಫೌಂಡೇಶನ್

ಬನ್ನಂಗಾಡಿ ಗ್ರಾ.ಪಂನಲ್ಲಿ ಕೀಟ ನಿರ್ವಹಣೆ ಜಾಗೃತಿ ಮತ್ತು ಪ್ರಾತ್ಯಕ್ಷಿಕೆ! ಮಂಡ್ಯ: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ

ಮುಂದೆ ಓದಿ »