ಬೆಂಗಳೂರಲ್ಲಿ ನಿಲ್ಲದ ಮಳೆಯ ಆರ್ಭಟ:  ಮುಂದುವರೆದ ಅಧಿಕಾರಿಗಳ ನಿರ್ಲಕ್ಷ!

ಬೆಂಗಳೂರಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಇದರಿಂದಾಗಿ 500 ಮನೆಗಳು ಜಲಾವೃತವಾಗಿದ್ದು ಐವರು ಸಾವನ್ನಪ್ಪಿದ್ದಾರೆ. ಸರ್ಕಾರದ ವಿರುದ್ಧ ಜನರು ತಮ್ಮ ಆಕ್ರೋಶ ಹೋರ ಹಾಕುತ್ತಿದ್ದಾರೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಬೆಂಗಳೂರಿನಲ್ಲಿ ಮಳೆಯಿಂದ ಉಂಟಾಗುವ ಈ ರೀತಿಯ ಸಮಸ್ಯೆಗಳು ಹೊಸದೇನೂ ಅಲ್ಲ. ಆದರೆ ಇದಕ್ಕೆ ಅಧಿಕಾರಿಗಳು ಸಮರ್ಪಕವಾಗಿ ಸಿದ್ಧತೆ ಮಾಡಿಕೊಳ್ಳುವುದಿಲ್ಲ ಎಂಬ ಟೀಕೆಗಳು ವ್ಯಾಪಕವಾಗಿ ಕೇಳಿ ಬರುತ್ತಿದೆ. ಈ ಬಾರಿ ಯೆಲ್ಲೋ ಅಲರ್ಟ್ ಘೋಷಣೆಯಾಗಿದ್ದರೂ ಸಹ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳದಿರುವುದರಿಂದ 500ಕ್ಕೂ ಹೆಚ್ಚು ಮನೆಗಳು ಸಂಪೂರ್ಣವಾಗಿ ಜಲಾವೃತಗೊಂಡಿದೆ ಮತ್ತು ಐವರು ಮೃತಪಟ್ಟಿದ್ದಾರೆ. ಇದು ಸರ್ಕಾರದ ನಿರ್ಲಕ್ಷ್ಯವನ್ನುಎತ್ತಿ ತೋರಿಸುತ್ತಿದೆ. ಇದು ಹೀಗೆ ಮುಂದುವರೆದರೆ, ಮುಂಗಾರು ಶುರುವಾಗುವ ಮುನ್ನವೇ ಹೀಗೆ ಇನ್ನು ಮುಂಗಾರಿನಲ್ಲಿ ಜನರ ಪಾಡು ಇದಕ್ಕೂ ಮೀಗಿಲಾಗಿರುತ್ತದೆ. 

 ಭಾರತೀಯ ಹವಾಮಾನ ಇಲಾಖೆ  ಪ್ರಕಾರ, ಕಳೆದ 36 ಗಂಟೆಗಳಲ್ಲಿ ಬೆಂಗಳೂರಿನ ಯಶವಂತಪುರ ಮತ್ತು ಕೆ.ಆರ್. ಪುರಂನಲ್ಲಿ ಅತೀ ಹೆಚ್ಚು ಮಳೆಯಾಗಿದೆ. ಈ ಭಾಗಗಳಲ್ಲಿ ಜಲಾವೃತ ಸ್ಥಿತಿ ತೀವ್ರವಾಗಿದೆ. ಮಹದೇವಪುರ ಮತ್ತು ಜಯನಗರದಲ್ಲಿ ಸಹ ರಸ್ತೆಗಳು ಮುಳುಗಡೆಯಾಗಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಬನ್ನೇರುಘಟ್ಟ ರಸ್ತೆ ಮತ್ತು ಕೊರಮಂಗಲದಲ್ಲಿ ಸಹ ದಾಖಲೆ ಪ್ರಮಾಣದ ಮಳೆಯಾಗಿದ್ದು, ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ವರದಿ ಪ್ರಕಟವಾಗುವ ಸಂದರ್ಭದಲ್ಲೂ ಬೆಂಗಳೂರಿನಲ್ಲಿ 3.4ಮೀ.ಮೀನಷ್ಟು ಮಳೆಯಾಗಿದ್ದು ಗಾಳಿಯ ವೇಗವೂ ಗಂಟೆಗೆ 24ಕಿ.ಮೀ ನಷ್ಟಿತ್ತು.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, “ಯಾರೂ ಚಿಂತಿಸುವ ಅಗತ್ಯವಿಲ್ಲ, ಜನರ ಜೀವ ಮತ್ತು ಆಸ್ತಿಯನ್ನು ರಕ್ಷಿಸುವುದು ನಮ್ಮ ಆದ್ಯತೆ” ಎಂದು ಹೇಳುತ್ತಿದ್ದಾರೆ. ಇದರ ಹೊರತಾಗಿ ಯಾವ ಕ್ರಮವೂ ಕೈಗೊಂಡಂತೆ ಕಾಣುತ್ತಿಲ್ಲ. ನಗರದಲ್ಲಿ ಐವರು ಸಾವನ್ನಪ್ಪಿದ್ದು 500ಕ್ಕೂ ಹೆಚ್ಚು ಮನೆಗಳು ನೀರಿನಲ್ಲಿ ಮುಳುಗಿದೆ. ಆದರೆ ಇತ್ತಕಡೆ ಸಚಿವರು ಮತ್ತು ಶಾಸಕರು ರಾಜ್ಯ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ತುಂಬಿರುವ ಸಂಭ್ರಮಾಚರಣೆಯಲ್ಲಿ ಮುಳುಗಿದ್ದಾರೆ.

 ಪ್ರತಿ ವರ್ಷ ಮಳೆಗಾಲದಲ್ಲಿ ಈ ರೀತಿಯ ಸಮಸ್ಯೆಗಳು ಮರುಕಳಿಸುತ್ತಿರುವುದರಿಂದ ಸರ್ಕಾರದ ಮೇಲೆ ಜನರ ಅಸಮಾಧಾನ ಆಕ್ರೋಶವಾಗಿ ಬದಲಾಗುತ್ತಿದೆ. ಒಳಚರಂಡಿ ವ್ಯವಸ್ಥೆ ಸುಧಾರಣೆ, ರಸ್ತೆ ನಿರ್ಮಾಣ, ಮತ್ತು ಮುಂಗಾರು ಮಳೆಗೆ ಸಿದ್ಧತೆಯ ಬಗ್ಗೆ ಸರ್ಕಾರ ಸಮರ್ಪಕವಾಗಿ ಯೋಜನೆ ರೂಪಿಸದಿರುವುದು ಈ ಸಮಸ್ಯೆಗೆ ಮೂಲ ಕಾರಣ ಎಂದು ಜನರು ಆರೋಪಿಸುತ್ತಿದ್ದಾರೆ.  

 ಅಲ್ಲದೇ  ಬಿಬಿಎಮ್‌ಪಿ ಚುನಾವಣೆ ನಡೆಯದೆ ಇರುವುದೇ ಇದಕ್ಕೆಲ್ಲ ಮೂಲ ಕಾರಣವೆನ್ನುವ ಜನರ ಕೂಗು ಹೆಚ್ಚಾಗಿ ಕೇಳಿ ಬರುತ್ತಿದೆ. ಬಿಬಿಎಮ್‌ಪಿ ಆಯುಕ್ತರನ್ನ ಸಂಪರ್ಕಿಸಿ ಈ ಮಳೆ ಅವಾಂತರದ ಬಗ್ಗೆ ಮಾಹಿತಿ ಕೇಳಿದರೆ, “ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದ್ದೇವೆ” ಎಂದು ಸರಳ ಉತ್ತರವನ್ನ ನೀಡಿ ಸುಮ್ಮನಾಗಿದ್ದಾರೆ.  

 ಬೆಂಗಳೂರಿನಲ್ಲಿ ಮಳೆಯ ಹಾವಳಿಯಿಂದ ಜನರು ತೀವ್ರ ಸಂಕಷ್ಟದಲ್ಲಿದ್ದಾರೆ. ಸರ್ಕಾರದಿಂದ ತಕ್ಷಣದ ಪರಿಹಾರ ಕ್ರಮಗಳು ಮತ್ತು ಶಾಶ್ವತ ಪರಿಹಾರದ ಯೋಜನೆಗಳ ಅಗತ್ಯವಿದೆ. ಜನರ ಜೀವನವನ್ನು ಸುಗಮಗೊಳಿಸುವಲ್ಲಿ ಸರ್ಕಾರದ ಪಾತ್ರವು ಮುಖ್ಯವಾಗಿದ್ದು, ಈ ಸವಾಲನ್ನು ಎದುರಿಸಲು ತ್ವರಿತ ಕ್ರಮಗಳು ಅಗತ್ಯವಾಗಿವೆ.

Share:

ಮತ್ತಷ್ಟು ಸುದ್ದಿ

ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಕಾರ್ಯಕ್ರಮ

ಅಲೆದಾಟ ಮುಕ್ತ ಆಡಳಿತದತ್ತ ಮೇಲುಕೋಟೆ ಮನೆ ಬಾಗಿಲಿಗೇ ಬಂದ ‘ಸರ್ಕಾರಿ ಸೇವೆ’ ಕಾರ್ಯಕ್ರಮ  ತಂತ್ರಜ್ಞಾನದ ಅರಿವನ್ನು ಆಡಳಿತ ಯಂತ್ರಕ್ಕೆ ವರ್ಗಾಯಿಸಿದ

ಬೆಂಗಳೂರಿನಲ್ಲಿ ಮೇ 25 ರಂದು 3ನೇ ಕರ್ನಾಟಕ ಸಂಘಟಕರ ಸಮಾವೇಶ

ಸಾಂಸ್ಕೃತಿಕ ನೀತಿ ಜಾರಿ ಮತ್ತು ಅಕಾಡೆಮಿಗಳ ಬಲವರ್ಧನೆಗೆ ಆಗ್ರಹಿಸಿ ರಂಗಕರ್ಮಿಗಳು ಹಾಗೂ ಸಾಂಸ್ಕೃತಿಕ ಸಂಘಟಕರ ಬೃಹತ್‌ ಸಮಾಲೋಚನೆ ಬೆಂಗಳೂರು: ಕರ್ನಾಟಕ

ಮುಂದೆ ಓದಿ »

ಪಾಂಡವಪುರದಲ್ಲಿ ಜೂನ್ 1 ರಿಂದ ‘ಸಾವಯವ ರೈತರ ಸಂತೆ’ ಆರಂಭ

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಜೈವಿಕ ಕ್ರಾಂತಿಯ ಮುನ್ನುಡಿ! ಮಂಡ್ಯ: ಹೈನುಗಾರಿಕೆ ಮತ್ತು ಕಬ್ಬಿನ ಬೆಳೆಯ ಮೂಲಕ ರಾಜ್ಯದ

ಮುಂದೆ ಓದಿ »