ಸಂವಿಧಾನ ಜಾರಿಯಾಗಿ 75 ವರ್ಷವಾದರು ಸಂಪೂರ್ಣ ಶಿಕ್ಷಣ ಸಾಧ್ಯವಾಗಿಲ್ಲ: ಸಿ.ಎಂ

ಕರ್ನಾಟಕ ಕುರುಬರ ಸಂಘದ ವತಿಯಿಂದ ಗದಗದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ಕುರುಬರ ಸಹಕಾರ ಪತ್ತಿನ ಸಂಘದ ಶತಮಾನೋತ್ಸವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟಿಸಿದರು .

ಗದಗ : ಕರ್ನಾಟಕ ಕುರುಬರ ಸಂಘದ ವತಿಯಿಂದ ಗದಗದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ಕುರುಬರ ಸಹಕಾರ ಪತ್ತಿನ ಸಂಘದ ಶತಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಶಿಕ್ಷಣ-ಸಂಘಟನೆ-ಹೋರಾಟ ಎಂಬ ಮಂತ್ರವನ್ನು ಎಲ್ಲರೂ ಪಾಲಿಸಬೇಕು ಎಂದು ಕರೆ ನೀಡಿದರು. ಸಂವಿಧಾನ ಜಾರಿಯಾಗಿ 75 ವರ್ಷಗಳು ಕಳೆದರೂ ಎಲ್ಲರಿಗೂ ಸಂಪೂರ್ಣ ಶಿಕ್ಷಣ ಸಿಗದಿರುವುದು ದುರಂತವಾಗಿದೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಸಿದ್ದರಾಮಯ್ಯ ಅವರು ಕುರುಬ ಸಮಾಜದ ಮುಂದಾಲೋಚನೆಯನ್ನು ಶ್ಲಾಘಿಸಿದರು. “ನೂರು ವರ್ಷಗಳ ಹಿಂದೆಯೇ ಕುರುಬ ಸಮಾಜವು ಸಂಘಟನೆಗೊಂಡು ಸಹಕಾರ ಸಂಘವನ್ನು ಸ್ಥಾಪಿಸಿತು. ಇದು ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಅತ್ಯಂತ ಪ್ರಗತಿಪರ ಹೆಜ್ಜೆಯಾಗಿದೆ. ಸಂವಿಧಾನ ಜಾರಿಗೆ ಮೊದಲೇ ಈ ರೀತಿಯ ಸಂಘಟನೆ ಮಾಡಿದ ಕೀರ್ತಿ ಕುರುಬ ಸಮಾಜಕ್ಕೆ ಸಲ್ಲುತ್ತದೆ,” ಎಂದರು. ಅಂಬೇಡ್ಕರ್ ಅವರು ಶಿಕ್ಷಣ, ಸಂಘಟನೆ ಮತ್ತು ಹೋರಾಟವನ್ನು ಹಿಂದುಳಿದ ಸಮುದಾಯಗಳ ಏಳಿಗೆಗೆ ಮೂರು ಪ್ರಮುಖ ಸೂತ್ರಗಳಾಗಿ ನೀಡಿದ್ದಾರೆ ಎಂದು ಅವರು ನೆನಪಿಸಿದರು.

ಸಮಾಜದಲ್ಲಿ ಶೂದ್ರ ಮತ್ತು ದಲಿತ ಸಮುದಾಯಗಳ ಹಿಂದುಳಿಕೆಗೆ ಶಿಕ್ಷಣದ ಕೊರತೆಯೇ ಪ್ರಮುಖ ಕಾರಣ ಎಂದು ಒತ್ತಿ ಹೇಳಿದರು. “ಸಾವಿರಾರು ವರ್ಷಗಳಿಂದ ಶೂದ್ರರು ಮತ್ತು ದಲಿತರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಅವರಿಗೆ ಶಿಕ್ಷಣದ ಹಕ್ಕು ಇರಲಿಲ್ಲ. ಅಂಬೇಡ್ಕರ್ ಅವರು ತಮ್ಮ ಜೀವನವಿಡೀ ಈ ಅಸಮಾನತೆಯ ವಿರುದ್ಧ ಹೋರಾಡಿದರು. ಶಿಕ್ಷಣವೇ ಈ ಅಸಮಾನತೆಯನ್ನು ತೊಡೆದುಹಾಕುವ ಪ್ರಮುಖ ಅಸ್ತ್ರ ಎಂದು ಅವರು ಮನಗಂಡಿದ್ದರು,” ಎಂದು ಅವರು ಹೇಳಿದರು.

ತಮ್ಮ ವೈಯಕ್ತಿಕ ಅನುಭವವನ್ನು ಹಂಚಿಕೊಂಡ ಸಿದ್ದರಾಮಯ್ಯ, “ನನಗೆ ರಾಜಪ್ಪ ಎಂಬ ಶಿಕ್ಷಕರು ಸಿಗದಿದ್ದರೆ ನಾನು ಶಿಕ್ಷಣ ಪಡೆಯುತ್ತಿರಲಿಲ್ಲ. ಶಿಕ್ಷಣ ಸಿಗದಿದ್ದರೆ ಮುಖ್ಯಮಂತ್ರಿಯಾಗಿ ಈ ಸ್ಥಾನಕ್ಕೆ ಬರುತ್ತಿರಲಿಲ್ಲ. ಬಹುಶಃ ಗ್ರಾಮದಲ್ಲಿ ಹಸು ಕಾಯುವ ಕೆಲಸ ಮಾಡುತ್ತಿದ್ದೆ,” ಎಂದು ಭಾವುಕರಾದರು. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಾಗಿ ತಾವು ಈ ಸ್ಥಾನಕ್ಕೆ ಏರಿದೆ ಎಂದು ಅವರು ಕೃತಜ್ಞತೆ ಸಲ್ಲಿಸಿದರು.

  “ನಮ್ಮ ಸರ್ಕಾರ ಶಿಕ್ಷಣ, ಆರೋಗ್ಯ ಮತ್ತು ಆಹಾರ ಸುರಕ್ಷತೆಗೆ ಪ್ರಮುಖ ಆದ್ಯತೆ ನೀಡುತ್ತಿದೆ. ಅಂಬೇಡ್ಕರ್, ಬಸವಣ್ಣ ಮತ್ತು ಮಹಾತ್ಮ ಗಾಂಧಿ ಅವರ ಆಶಯಗಳು ಈಡೇರಬೇಕಾದರೆ, ಸಮಾಜದ ಪ್ರತಿಯೊಬ್ಬರಿಗೂ ಶಿಕ್ಷಣ ಸಿಗಬೇಕು. ಎಲ್ಲರಿಗೂ ಆರ್ಥಿಕ ಸ್ವಾವಲಂಬನೆ ದೊರಕಬೇಕು,” ಎಂದರು. ಶಿಕ್ಷಣವಿಲ್ಲದೆ ಸ್ವಾಭಿಮಾನದ ಬದುಕು ಸಾಧ್ಯವಿಲ್ಲ ಎಂದು ಅವರು ಒತ್ತಿ ಹೇಳಿದರು.

ಕುರುಬ ಸಮಾಜದ ಸಹಕಾರ ಸಂಘದ ಪಾತ್ರವನ್ನು ಮೆಚ್ಚಿದ ಸಿದ್ದರಾಮಯ್ಯ, “ಸಹಕಾರ ಸಂಘಗಳು ಸಮಾಜದ ಆರ್ಥಿಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿವೆ. ಇದು ಹಿಂದುಳಿದ ಸಮುದಾಯಗಳ ಏಳಿಗೆಗೆ ಒಂದು ಮಾದರಿಯಾಗಿದೆ,” ಎಂದರು. ಈ ಸಂದರ್ಭದಲ್ಲಿ, ಅಂಬೇಡ್ಕರ್ ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು ಸಾಮಾಜಿಕ ನ್ಯಾಯದತ್ತ ಹೆಜ್ಜೆ ಇಡಬೇಕು ಎಂದು ಅವರು ಆಹ್ವಾನಿಸಿದರು. 

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »