ಚಿನ್ನಸ್ವಾಮಿ ಕಾಲ್ತುಳಿತ: 5 ಪೊಲೀಸರ ಅಮಾನತು, ಸಿಎಂಗೆ ಒಕ್ಕೂಟದ ಖಡಕ್ ಪತ್ರ

ಆರ್‌ಸಿಬಿ ವಿಜಯೋತ್ಸವದ ಸಂಧರ್ಭದಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ಪೋಲಿಸರ ಕರ್ತವ್ಯಲೋಪವೇ ಕಾರಣವೆಂದು ಕರ್ನಾಟಕ ರಾಜ್ಯ ಸರ್ಕಾರವು ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದೆ. ಇದಕ್ಕೆ ಸಂಬಂಧಿಸಿದಂತೆ ಭಾರತೀಯ ಪೊಲೀಸ್ ಒಕ್ಕೂಟವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ಅಮಾನತುಗೊಂಡ ಅಧಿಕಾರಿಗಳನ್ನು ಮರುನೇಮಕ ಮಾಡುವಂತೆ ಒತ್ತಾಯಿಸಿದೆ.

ಬೆಂಗಳೂರು:  ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಜೂನ್ 03, 2025 ರಂದು ನಡೆದ ಆರ್‌ಸಿಬಿ ವಿಜಯೋತ್ಸವದ ಕಾಲ್ತುಳಿತ ದುರಂತದಲ್ಲಿ 11 ಜನ ಆರ್‌ಸಿಬಿ ಅಭಿಮಾನಿಗಳು ದಾರುಣವಾಗಿ ಮೃತಪಟ್ಟಿದ್ದಾರೆ. ಈ ಘಟನೆಗೆ ಕಾರಣವೆಂದು ಕರ್ತವ್ಯಲೋಪದ ಆರೋಪದಡಿ ಕರ್ನಾಟಕ ರಾಜ್ಯ ಸರ್ಕಾರವು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಜೂನ್ 05, 2025 ರಂದು ಅಮಾನತುಗೊಳಿಸಿದೆ. ಈ ಕ್ರಮಕ್ಕೆ ಸಾರ್ವಜನಿಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿರುದ್ಧ ಟೀಕೆಗಳು ಕೇಳಿಬಂದಿವೆ. ಇದೀಗ, ಭಾರತೀಯ ಪೊಲೀಸ್ ಒಕ್ಕೂಟವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ಅಮಾನತುಗೊಂಡ ಅಧಿಕಾರಿಗಳನ್ನು ಮರುನೇಮಕ ಮಾಡುವಂತೆ ಒತ್ತಾಯಿಸಿದೆ.

ಭಾರತೀಯ ಪೊಲೀಸ್ ಒಕ್ಕೂಟವು ತನ್ನ ಪತ್ರದಲ್ಲಿ, “ಕಾಲ್ತುಳಿತ ದುರಂತದಲ್ಲಿ ಅಮೂಲ್ಯ ಜೀವಗಳು ಬಲಿಯಾಗಿರುವುದಕ್ಕೆ ತೀವ್ರ ವಿಷಾದ ವ್ಯಕ್ತಪಡಿಸುತ್ತೇವೆ. ಮೃತರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ,” ಎಂದು ತಿಳಿಸಿದೆ. ಜೊತೆಗೆ, ಈ ಘಟನೆಯ ಬಗ್ಗೆ ನಿಷ್ಪಕ್ಷ ನ್ಯಾಯಾಂಗ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿರುವುದನ್ನು ಸ್ವಾಗತಿಸಿದೆ. ಆದರೆ, ತನಿಖೆ ಪೂರ್ಣಗೊಳ್ಳುವ ಮೊದಲೇ ಐವರು ಅಧಿಕಾರಿಗಳನ್ನು ಅಮಾನತುಗೊಳಿಸಿರುವುದು ಪೊಲೀಸ್ ಸಮುದಾಯದಲ್ಲಿ ಕಳವಳಕ್ಕೆ ಕಾರಣವಾಗಿದೆ ಎಂದು ಒಕ್ಕೂಟವು ಆಕ್ಷೇಪ ವ್ಯಕ್ತಪಡಿಸಿದೆ.

ಅಮಾನತುಗೊಂಡ ಅಧಿಕಾರಿಗಳ ಪೈಕಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್, ಕೇಂದ್ರ ವಿಭಾಗದ ಡಿಸಿಪಿ ಎಚ್.ಟಿ. ಶೇಖರ್, ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್, ಎಸಿಪಿ ಬಾಲಕೃಷ್ಣ ಮತ್ತು ಕಬ್ಬನ್‌ಪಾರ್ಕ್ ಇನ್ಸ್‌ಪೆಕ್ಟರ್ ಗಿರೀಶ್ ಎ.ಕೆ. ಸೇರಿದ್ದಾರೆ. ಭಾರತೀಯ ಪೊಲೀಸ್ ಒಕ್ಕೂಟವು, ಈ ರೀತಿಯ ದೊಡ್ಡ ಸಾರ್ವಜನಿಕ ಕಾರ್ಯಕ್ರಮಗಳಿಗೆ ಪೊಲೀಸರೊಬ್ಬರೇ ಜವಾಬ್ದಾರರಲ್ಲ. ಆಡಳಿತ, ನಾಗರಿಕ ಮತ್ತು ರಾಜಕೀಯ ಸಂಸ್ಥೆಗಳ ಸಂಘಟಿತ ಪ್ರಯತ್ನಗಳು ಅಗತ್ಯವಿರುತ್ತವೆ. ಆದರೆ, ಪೊಲೀಸರನ್ನು ಮಾತ್ರ ಗುರಿಯಾಗಿಸಿ ಶಿಕ್ಷಾರ್ಹ ಕ್ರಮಕ್ಕೊಳಪಡಿಸುವುದು ತಪ್ಪು ಸಂದೇಶವನ್ನು ನೀಡುತ್ತದೆ ಎಂದು ಪತ್ರದಲ್ಲಿ ತಿಳಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಈ ಅಮಾನತು ಕ್ರಮದ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿದೆ. ಸರ್ಕಾರದ ತಪ್ಪಿಗೆ ದಕ್ಷ ಅಧಿಕಾರಿಗಳನ್ನು ಬಲಿಪಶುವನ್ನಾಗಿ ಮಾಡಲಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ, ಕೆಪಿಸಿಸಿ ವಕ್ತಾರ ರಮೇಶ್ ಬಾಬು, “ಬಿ. ದಯಾನಂದ್ ಅವರು ಉತ್ತಮ ಕೆಲಸ ಮಾಡಿದ್ದಾರೆ. ಆದರೆ, ಕಾಲ್ತುಳಿತ ಘಟನೆಯ ಬಗ್ಗೆ ಸಿಎಂಗೆ ಮಾಹಿತಿ ನೀಡುವಲ್ಲಿ ವಿಳಂಬವಾಯಿತು. ಈ ಕಾರಣಕ್ಕೆ ಅಮಾನತು ಕ್ರಮ ಅನಿವಾರ್ಯವಾಯಿತು,” ಎಂದು ಸಮರ್ಥಿಸಿಕೊಂಡಿದ್ದಾರೆ. 

ಭಾರತೀಯ ಪೊಲೀಸ್ ಒಕ್ಕೂಟವು, “ತನಿಖೆ ಪೂರ್ಣಗೊಳ್ಳುವವರೆಗೆ ಅಮಾನತುಗೊಂಡ ಅಧಿಕಾರಿಗಳನ್ನು ಮರುನೇಮಕ ಮಾಡಿ. ತನಿಖೆಯ ಫಲಿತಾಂಶದ ಆಧಾರದ ಮೇಲೆ ಶಿಸ್ತು ಕ್ರಮ ಕೈಗೊಳ್ಳಿ,” ಎಂದು ಸರ್ಕಾರವನ್ನು ಒತ್ತಾಯಿಸಿದೆ. 

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »