ಕೋವಿಡ್‌ ಪರೀಕ್ಷೆಗೆ ದುಬಾರಿ ಶುಲ್ಕ ವಿಧಿಸುವಂತಿಲ್ಲ : ಖಾಸಗಿ ಆಸ್ಪತ್ರೆಗಳಿಗೆ ಸಿಎಂ ಎಚ್ಚರಿಕೆ

ಕೋವಿಡ್-19 ಪರೀಕ್ಷೆಯ ಹೆಸರಿನಲ್ಲಿ ಖಾಸಗಿ ಆಸ್ಪತ್ರೆಗಳು ದುಬಾರಿ ಶುಲ್ಕ ವಿಧಿಸುತ್ತಿರುವ ದೂರುಗಳು ಕೇಳಿಬಂದಿವೆ. ಇಂತಹ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ, ಪರಿಶೀಲನೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Investigate the CAG report that exposed corruption: Siddaramaiah challenges Modi

ಬೆಂಗಳೂರು: ಕೋವಿಡ್-19 ಪರೀಕ್ಷೆಯ ಹೆಸರಿನಲ್ಲಿ ಖಾಸಗಿ ಆಸ್ಪತ್ರೆಗಳು ದುಬಾರಿ ಶುಲ್ಕ ವಿಧಿಸುತ್ತಿರುವ ದೂರುಗಳು ಕೇಳಿಬಂದಿವೆ. ಇಂತಹ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ, ಪರಿಶೀಲನೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಈ ವರ್ಷ 11 ಕೋವಿಡ್ ಸಂಬಂಧಿತ ಸಾವುಗಳು ವರದಿಯಾಗಿವೆ. ಆದರೆ, ಈ ಪೈಕಿ 10 ಸಾವುಗಳು ಕೋವಿಡ್‌ನಿಂದಾಗಿ ಸಂಭವಿಸಿಲ್ಲ. ಈ ರೋಗಿಗಳು ದೀರ್ಘಕಾಲದ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದವರಾಗಿದ್ದು, ಸಾವಿನ ಸಮಯದಲ್ಲಿ ಅವರಿಗೆ ಕೋವಿಡ್ ಪಾಸಿಟಿವ್ ಇತ್ತು ಎಂದು ಸ್ಪಷ್ಟಪಡಿಸಿದರು. ಒಂದು ಸಾವಿನ ಡೆತ್ ಆಡಿಟ್ ವರದಿ ಇನ್ನೂ ಬರಬೇಕಿದೆ. ಆದ್ದರಿಂದ, ಪ್ರತಿ ಕೋವಿಡ್ ಸಾವಿನ ಬಗ್ಗೆ ಸ್ಪಷ್ಟ ಮಾಹಿತಿಯನ್ನು ಜನರಿಗೆ ಒದಗಿಸಿ, ಅನಗತ್ಯ ಭಯವನ್ನು ಕಡಿಮೆ ಮಾಡಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯದಲ್ಲಿ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸಲಾಗಿದೆ. ಪ್ರತಿದಿನ ಸರಾಸರಿ 500 ಮಾದರಿಗಳನ್ನು ಪರೀಕ್ಷಿಸಲಾಗುತ್ತಿದ್ದು, ಕಳೆದ 10 ದಿನಗಳಲ್ಲಿ 5,000ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದೆ. ಇದರಿಂದ 862 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆದರೂ, ಕೋವಿಡ್‌ನಿಂದ ಸಾವು ಸಂಭವಿಸುವ ಸಾಧ್ಯತೆ ಕಡಿಮೆ ಇದ್ದು, ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಎಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಪ್ರಕರಣಗಳನ್ನು ನಿರ್ವಹಿಸಲು ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದರು. ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು. ಖಾಸಗಿ ಆಸ್ಪತ್ರೆಗಳು ಕೋವಿಡ್ ಪರೀಕ್ಷೆಗೆ ದುಬಾರಿ ಶುಲ್ಕ ವಿಧಿಸುವುದನ್ನು ತಡೆಯಲು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆದೇಶಿಸಿದರು. 2020ರಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಕೋವಿಡ್ ಪರೀಕ್ಷೆಗೆ ₹4,500 ಗರಿಷ್ಠ ಶುಲ್ಕ ನಿಗದಿಪಡಿಸಲಾಗಿತ್ತು, ಆದರೆ ಈಗಲೂ ಕೆಲವು ಆಸ್ಪತ್ರೆಗಳು ಇದಕ್ಕಿಂತ ಹೆಚ್ಚಿನ ಶುಲ್ಕ ವಿಧಿಸುತ್ತಿರುವ ದೂರುಗಳಿವೆ.

ಕರ್ನಾಟಕದಲ್ಲಿ ಕೋವಿಡ್ ಪರೀಕ್ಷೆಯನ್ನು ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಮಾಡಲಾಗುತ್ತಿದೆ, ಆದರೆ ಖಾಸಗಿ ಆಸ್ಪತ್ರೆಗಳಲ್ಲಿ ಶುಲ್ಕ ವಿಧಿಸಲಾಗುತ್ತದೆ. ಈ ಶುಲ್ಕವು ಸರ್ಕಾರದ ನಿಗದಿತ ಮಿತಿಯೊಳಗೆ ಇರಬೇಕು ಎಂದು ಮುಖ್ಯಮಂತ್ರಿಗಳು ಒತ್ತಾಯಿಸಿದ್ದಾರೆ. ಯಾವುದೇ ಖಾಸಗಿ ಆಸ್ಪತ್ರೆಯು ನಿಗದಿತ ಶುಲ್ಕಕ್ಕಿಂತ ಹೆಚ್ಚಿನ ದರ ವಿಧಿಸಿದರೆ, ಆರೋಗ್ಯ ಇಲಾಖೆಯಿಂದ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ, ಎಲ್ಲಾ ಆಸ್ಪತ್ರೆಗಳು ಕೋವಿಡ್ ಪರೀಕ್ಷೆಯನ್ನು ಕೈಗೆಟುಕುವ ದರದಲ್ಲಿ ಒದಗಿಸಬೇಕು ಎಂದು ಸರ್ಕಾರ ಸೂಚಿಸಿದೆ.

ಕೊರೋನಾ ಸಹಾಯವಾಣಿಯನ್ನು ಆರಂಭಿಸಲು ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ, ಇದರಿಂದ ಸಾರ್ವಜನಿಕರಿಗೆ ಮಾಹಿತಿ ಮತ್ತು ಸಹಾಯ ಸಿಗಲಿದೆ. ವಿಮಾನ ನಿಲ್ದಾಣಗಳಲ್ಲಿ ಹೊರಗಡೆಯಿಂದ ಬರುವ ಪ್ರಯಾಣಿಕರಿಗೆ ತಪಾಸಣೆ ಘಟಕಗಳನ್ನು ಸ್ಥಾಪಿಸುವ ಕುರಿತು ಮುಂದಿನ ದಿನಗಳಲ್ಲಿ ಅಗತ್ಯಕ್ಕೆ ತಕ್ಕಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

Share:

ಮತ್ತಷ್ಟು ಸುದ್ದಿ

ಪಾಂಡವಪುರದಲ್ಲಿ ಜೂನ್ 1 ರಿಂದ ‘ಸಾವಯವ ರೈತರ ಸಂತೆ’ ಆರಂಭ

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಜೈವಿಕ ಕ್ರಾಂತಿಯ ಮುನ್ನುಡಿ! ಮಂಡ್ಯ: ಹೈನುಗಾರಿಕೆ ಮತ್ತು ಕಬ್ಬಿನ ಬೆಳೆಯ ಮೂಲಕ ರಾಜ್ಯದ

ಮುಂದೆ ಓದಿ »