ಬೆಳ್ಳಂಬೆಳಗ್ಗೆ ಕಟ್ಟೇರಿ ಗ್ರಾ.ಪಂ.ಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭೇಟಿ

ಸರ್ಕಾರಿ ಸೇವೆ ಮನೆ ಬಾಗಿಲಿಗೆ ಸೇವೆ ಕುರಿತು ಪರಿಶೀಲನೆ  

ಮಂಡ್ಯ: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿರುವ “ಸರ್ಕಾರಿ ಸೇವೆ ಮನೆ ಬಾಗಿಲಿಗೆ” ಕಾರ್ಯಕ್ರಮದ ಹಿನ್ನೆಲೆಯಲ್ಲಿ, ಇಂದು ಬೆಳ್ಳಂಬೆಳಿಗ್ಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇಡೀ ದಿನ ಹಾಗೂ ಮುಂದಿನ ದಿನಗಳಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಸುಗಮವಾಗಿ ನಡೆಯಲು ಅಧಿಕಾರಿಗಳು ಯಾವ ರೀತಿ ಕಾರ್ಯನಿರ್ವಹಿಸಬೇಕು ಎಂಬ ಕುರಿತು ಶಾಸಕರು ಮಹತ್ವದ ಸಲಹೆ ಹಾಗೂ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

ಜನರಿಗೆ ತೊಂದರೆಯಾಗದಂತೆ ಮನೆ ಬಾಗಿಲಿಗೆ ಸೇವೆ: ಸರ್ಕಾರದ ಸೌಲಭ್ಯಗಳು ಮತ್ತು ಸೇವೆಗಳು ಜನಸಾಮಾನ್ಯರಿಗೆ ಯಾವುದೇ ಅಡಚಣೆಯಾಗದಂತೆ ನೇರವಾಗಿ ಅವರ ಮನೆ ಬಾಗಿಲಿಗೆ ತಲುಪಬೇಕು. ಸಾರ್ವಜನಿಕರು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸುವುದೇ ಈ ಕಾರ್ಯಕ್ರಮದ ಮೂಲ ಉದ್ದೇಶ ಎಂದು ಶಾಸಕರು ಸ್ಪಷ್ಟಪಡಿಸಿದರು.

65 ದಾಟಿದವರಿಗೆ ಅಧಿಕಾರಿಗಳೇ ಕರೆ ಮಾಡಿ ಆಧಾರ್ ನೀಡಲಿ: 65 ವರ್ಷ ಪೂರ್ಣಗೊಂಡಿರುವ ಹಿರಿಯ ನಾಗರಿಕರಿಗೆ ಆಧಾರ್ ಕಾರ್ಡ್‌ಗಳನ್ನು ತಲುಪಿಸಲು ಅಧಿಕಾರಿಗಳೇ ಖುದ್ದಾಗಿ ಫೋನ್ ಕರೆ ಮಾಡಿ, ಅವರ ಮನೆಗೇ ಹೋಗಿ ತಲುಪಿಸುವ ವ್ಯವಸ್ಥೆ ಮಾಡಬೇಕು ಎಂದು ಶಾಸಕರು ವಿಶೇಷ ಕಾಳಜಿ ವಹಿಸಿ ಸೂಚಿಸಿದರು.

ನ್ಯಾಯಬೆಲೆ ಅಂಗಡಿ ಸಮಸ್ಯೆಗಳಿಗೆ ತ್ವರಿತ ಮುಕ್ತಿ: ಪಡಿತರ ಚೀಟಿ ಹಾಗೂ ನ್ಯಾಯಬೆಲೆ ಅಂಗಡಿಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಕೇಳಿಬರುತ್ತಿರುವ ದೂರುಗಳು ಮತ್ತು ತಾಂತ್ರಿಕ ಸಮಸ್ಯೆಗಳನ್ನು ತ್ವರಿತವಾಗಿ, ಸ್ಥಳದಲ್ಲೇ ಪರಿಹರಿಸಲು ಅಧಿಕಾರಿಗಳಿಗೆ ಗಡುವು ನೀಡಿದರು.

ಜನಸ್ನೇಹಿ ಆಡಳಿತಕ್ಕೆ ಶಾಸಕರ ಒತ್ತು: ಜನರು ನಮಗೆ ಅಧಿಕಾರ ನೀಡಿರುವುದು ಅವರ ಸೇವೆ ಮಾಡಲು. ಅಧಿಕಾರಿಗಳು ಕೇವಲ ಕಚೇರಿಗೆ ಸೀಮಿತವಾಗದೆ, ಜನರ ಸಂಕಷ್ಟಗಳಿಗೆ ಸ್ಪಂದಿಸಬೇಕು. ಯಾವುದೇ ಒಬ್ಬ ಸಾರ್ವಜನಿಕನೂ ಸರ್ಕಾರದ ಸೌಲಭ್ಯಗಳಿಂದ ವಂಚಿತನಾಗಬಾರದು. ಇಂದಿನ ಮುಂಜಾನೆಯ ಭೇಟಿಯ ಉದ್ದೇಶವೇ ಆಡಳಿತವನ್ನು ಚುರುಕುಗೊಳಿಸುವುದಾಗಿದೆ ಎಂದು ಅವರು ಹೇಳಿದರು.  

ಶಾಸಕರ ಈ ಮುಂಜಾನೆಯ ದಿಢೀರ್ ಭೇಟಿ ಮತ್ತು ಜನಪರ ಕಟ್ಟುನಿಟ್ಟಿನ ಸೂಚನೆಗಳಿಗೆ ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಶಾಸಕರ ಭೇಟಿಯ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

Share:

ಮತ್ತಷ್ಟು ಸುದ್ದಿ

ಉಳಿಗೆರೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸೋಲಾರ್ ವಿದ್ಯುತ್ ಘಟಕ ಉದ್ಘಾಟನೆ

ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಹಾಗೂ ಫೌಂಡೇಶನ್‌ ಮಹತ್ವದ ಕೊಡುಗೆ ಸೆಲ್ಕೋ ಮತ್ತು ಪುಟ್ಟಣ್ಣಯ್ಯ ಫೌಂಡೇಶನ್‌ನ ಶ್ಲಾಘನೀಯ ಕಾರ್ಯ ಮಂಡ್ಯ:

ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಕಾರ್ಯಕ್ರಮ

ಅಲೆದಾಟ ಮುಕ್ತ ಆಡಳಿತದತ್ತ ಮೇಲುಕೋಟೆ ಮನೆ ಬಾಗಿಲಿಗೇ ಬಂದ ‘ಸರ್ಕಾರಿ ಸೇವೆ’ ಕಾರ್ಯಕ್ರಮ  ತಂತ್ರಜ್ಞಾನದ ಅರಿವನ್ನು ಆಡಳಿತ ಯಂತ್ರಕ್ಕೆ ವರ್ಗಾಯಿಸಿದ

ಮೋದಿಯವರ 3.0 ಸರ್ಕಾರದ 2 ವರ್ಷಗಳ 10 ಪ್ರಮುಖ ಸಾಧನೆಗಳು ಮತ್ತು ವೈಫಲ್ಯಗಳೇನು?

ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗಿ 12 ವರ್ಷಗಳನ್ನು ಪೂರೈಸಿದ್ದಾರೆ. ಸತತ 3ನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿ 2 ವರ್ಷಗಳನ್ನು

ಮುಂದೆ ಓದಿ »

ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಲು ಮನವಿ

ಕಾಂಗ್ರೆಸ್‌ ಹೈಕಮಾಂಡ್‌ಗೆ ಭಾರತೀಯ ಕ್ರಾಂತಿಕಾರಿ ಕಿಸಾನ್ ಸೇನಾ ಒತ್ತಾಯ ಮೈಸೂರು: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರಿಗೆ

ಮುಂದೆ ಓದಿ »