ಉಳಿಗೆರೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸೋಲಾರ್ ವಿದ್ಯುತ್ ಘಟಕ ಉದ್ಘಾಟನೆ

ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಹಾಗೂ ಫೌಂಡೇಶನ್‌ ಮಹತ್ವದ ಕೊಡುಗೆ

ಸೆಲ್ಕೋ ಮತ್ತು ಪುಟ್ಟಣ್ಣಯ್ಯ ಫೌಂಡೇಶನ್‌ನ ಶ್ಲಾಘನೀಯ ಕಾರ್ಯ

ಮಂಡ್ಯ: ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಉಳಿಗೆರೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಬಾಲಕರ ಮತ್ತು ಬಾಲಕಿಯರ ವಸತಿ ನಿಲಯಗಳಿಗೆ ಅಳವಡಿಸಲಾಗಿರುವ ನೂತನ ಸೋಲಾರ್ ವಿದ್ಯುತ್ ಘಟಕದ ಉದ್ಘಾಟನಾ ಸಮಾರಂಭ ಅತ್ಯಂತ ಯಶಸ್ವಿಯಾಗಿ ನೆರವೇರಿತು.

ಈ ಮಹತ್ವದ ಯೋಜನೆಯನ್ನು ಸೆಲ್ಕೋ ಫೌಂಡೇಶನ್ ಮತ್ತು ಪುಟ್ಟಣ್ಣಯ್ಯ ಫೌಂಡೇಶನ್ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಗ್ರಾಮೀಣ ಭಾಗದ ವಿದ್ಯಾರ್ಥಿ ನಿಲಯಗಳಿಗೆ ನಿರಂತರ ಮತ್ತು ಪರಿಸರಸ್ನೇಹಿ ವಿದ್ಯುತ್ ಸೌಲಭ್ಯವನ್ನು ಒದಗಿಸುವ ಉದ್ದೇಶದಿಂದ ಈ ಸೋಲಾರ್ ಘಟಕವನ್ನು ಅಳವಡಿಸಲಾಗಿದೆ.

ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಹಾಗೂ ಫೌಂಡೇಶನ್‌ಗಳ ಮಹತ್ವದ ಕೊಡುಗೆ: ಈ ಸಮಾಜಮುಖಿ ಕಾರ್ಯಕ್ರಮ ಮೂಡಿಬರಲು ಸೆಲ್ಕೋ ಫೌಂಡೇಶನ್ ಹಾಗೂ ಪುಟ್ಟಣ್ಣಯ್ಯ ಫೌಂಡೇಶನ್‌ನ ಕೊಡುಗೆ ಅತ್ಯಂತ ಪ್ರಮುಖವಾಗಿದೆ. ವಿಶೇಷವಾಗಿ, ದರ್ಶನ್ ಪುಟ್ಟಣ್ಣಯ್ಯ ಅವರ ದೂರದೃಷ್ಟಿ, ನೇತೃತ್ವ ಮತ್ತು ವಿಶೇಷ ಕಾಳಜಿಯ ಪರಿಣಾಮವಾಗಿ ಈ ಯೋಜನೆ ಇಷ್ಟೊಂದು ಯಶಸ್ವಿಯಾಗಿ ಸಾಕಾರಗೊಂಡಿದೆ. ಗ್ರಾಮೀಣ ಭಾಗದ ಹಿಂದುಳಿದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಮೂಲಸೌಕರ್ಯಗಳನ್ನು ಒದಗಿಸುವಲ್ಲಿ ಮತ್ತು ನವೀಕರಿಸಬಹುದಾದ ಇಂಧನ (ಸೋಲಾರ್) ಬಳಕೆಯನ್ನು ಪ್ರೋತ್ಸಾಹಿಸುವಲ್ಲಿ ಇವರ ಕೊಡುಗೆ ಹೈಲೈಟ್ ಆಗುವಂತದ್ದಾಗಿದೆ.

ಸೋಲಾರ್ ವಿದ್ಯುತ್ ಘಟಕದ ಉದ್ಘಾಟನೆ ಕಾರ್ಯಕ್ರಮಲ್ಲಿ ಮಾತನಾಡಿದ ದರ್ಶನ್‌ ಪುಟ್ಟಣ್ಣಯ್ಯ ಅವರು, ಸೋಲಾರ್‌ ವಿದ್ಯುತ್‌ ಬಳಕೆಯಿಂದ ಪರಿಸರದ ಮೇಲೆ ಆಗುವ ಪರಿಣಾಮ ನಿಯಂತ್ರಣವಾಗುತ್ತದೆ. ಜೊತೆಗೆ ವಿದ್ಯಾರ್ಥಿಗಳ ನಿರಂತರ ಓದಿಗೆ ಅನುಕೂಲವಾಗುತ್ತದೆ. ಇಂತಹ ಯೋಜನೆ ಕಾರ್ಯಗತಗೊಳಿಸಿದ ಪುಟ್ಟಣ್ಣಯ್ಯ ಫೌಂಡೇಶನ್‌ ಮತ್ತು ಸೆಲ್ಕೋ ಫೌಂಡೇಶನ್‌ ಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದರು. ಒಟ್ಟಿನಲ್ಲಿ ಹುಲಿಗೆರೆಯ ಮೊರಾರ್ಜಿ ದೇಸಾಯಿ ವಸತಿ ಶಾಲಾ ಆವರಣದಲ್ಲಿ ನಡೆದ ಈ ಉದ್ಘಾಟನಾ ಸಮಾರಂಭ ವಿದ್ಯಾರ್ಥಿಗಳಲ್ಲಿ ಹೊಸ ಭರವಸೆಯನ್ನು ಮೂಡಿಸಿದೆ. ಈ ಸೋಲಾರ್ ವಿದ್ಯುತ್ ಘಟಕದಿಂದಾಗಿ ವಿದ್ಯಾರ್ಥಿ ನಿಲಯಗಳಲ್ಲಿ ಇನ್ನು ಮುಂದೆ ವಿದ್ಯುತ್ ವ್ಯತ್ಯಯದ ಸಮಸ್ಯೆ ನಿವಾರಣೆಯಾಗಲಿದ್ದು, ಮಕ್ಕಳು ನಿರಾತಂಕವಾಗಿ ಓದಿಕೊಳ್ಳಲು ಅನುಕೂಲ ಕಲ್ಪಿಸಿಕೊಟ್ಟಂತಾಗಿದೆ. ಈ ಸತ್ಕಾರ್ಯಕ್ಕೆ ಸಾರ್ವಜನಿಕರಿಂದ ಹಾಗೂ ಶಾಲಾ ಸಿಬ್ಬಂದಿಯಿಂದ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.

Share:

ಮತ್ತಷ್ಟು ಸುದ್ದಿ

ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಕಾರ್ಯಕ್ರಮ

ಅಲೆದಾಟ ಮುಕ್ತ ಆಡಳಿತದತ್ತ ಮೇಲುಕೋಟೆ ಮನೆ ಬಾಗಿಲಿಗೇ ಬಂದ ‘ಸರ್ಕಾರಿ ಸೇವೆ’ ಕಾರ್ಯಕ್ರಮ  ತಂತ್ರಜ್ಞಾನದ ಅರಿವನ್ನು ಆಡಳಿತ ಯಂತ್ರಕ್ಕೆ ವರ್ಗಾಯಿಸಿದ

ಉಳಿಗೆರೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸೋಲಾರ್ ವಿದ್ಯುತ್ ಘಟಕ ಉದ್ಘಾಟನೆ

ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಹಾಗೂ ಫೌಂಡೇಶನ್‌ ಮಹತ್ವದ ಕೊಡುಗೆ ಸೆಲ್ಕೋ ಮತ್ತು ಪುಟ್ಟಣ್ಣಯ್ಯ ಫೌಂಡೇಶನ್‌ನ ಶ್ಲಾಘನೀಯ ಕಾರ್ಯ ಮಂಡ್ಯ:

ಮುಂದೆ ಓದಿ »

ಮೋದಿಯವರ 3.0 ಸರ್ಕಾರದ 2 ವರ್ಷಗಳ 10 ಪ್ರಮುಖ ಸಾಧನೆಗಳು ಮತ್ತು ವೈಫಲ್ಯಗಳೇನು?

ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗಿ 12 ವರ್ಷಗಳನ್ನು ಪೂರೈಸಿದ್ದಾರೆ. ಸತತ 3ನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿ 2 ವರ್ಷಗಳನ್ನು

ಮುಂದೆ ಓದಿ »

ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಲು ಮನವಿ

ಕಾಂಗ್ರೆಸ್‌ ಹೈಕಮಾಂಡ್‌ಗೆ ಭಾರತೀಯ ಕ್ರಾಂತಿಕಾರಿ ಕಿಸಾನ್ ಸೇನಾ ಒತ್ತಾಯ ಮೈಸೂರು: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರಿಗೆ

ಮುಂದೆ ಓದಿ »