ಕೇಂದ್ರದ ಕಾರ್ಮಿಕ ವಿರೋಧಿ ನೀತಿಗೆ ಖಂಡನೆ: ಕಾರ್ಮಿಕ ಹಿತ ರಕ್ಷಣೆಗೆ ಇಂಡಿಯಾ ಲೇಬರ್ ಲೈನ್ ಬದ್ಧ

ದೇಶದ ಅಭಿವೃದ್ಧಿಗೆ ತಮ್ಮ ಶ್ರಮವನ್ನು ಅರ್ಪಿಸುತ್ತಿರುವ ವಲಸೆ ಕಾರ್ಮಿಕರು ಇಂದು ಮಾಲೀಕರಿಂದ ವಿವಿಧ ರೀತಿಯ ಶೋಷಣೆಗೆ ಒಳಗಾಗುತ್ತಿರುವುದು ಅತ್ಯಂತ ವಿಷಾದನೀಯವಾಗಿದೆ.
india labour line

ದೇಶದ ಅಭಿವೃದ್ಧಿಗೆ ತಮ್ಮ ಶ್ರಮವನ್ನು ಅರ್ಪಿಸುತ್ತಿರುವ ವಲಸೆ ಕಾರ್ಮಿಕರು ಇಂದು ಮಾಲೀಕರಿಂದ ವಿವಿಧ ರೀತಿಯ ಶೋಷಣೆಗೆ ಒಳಗಾಗುತ್ತಿರುವುದು ಅತ್ಯಂತ ವಿಷಾದನೀಯವಾಗಿದೆ. ಯಾವುದೇ ಸಮಗ್ರ ಸಮಾಲೋಚನೆ ನಡೆಸದೇ ಕೇಂದ್ರ ಸರ್ಕಾರವು 21 ನವೆಂಬರ್ 2025 ರಂದು ಜಾರಿಗೆ ತಂದಿರುವ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳು ಕಾರ್ಮಿಕರ ಉದ್ಯೋಗ ಭದ್ರತೆ, ಕೂಲಿ ಹಕ್ಕುಗಳು ಹಾಗೂ ಸಾಮಾಜಿಕ ಭದ್ರತೆಯನ್ನು ಗಂಭೀರವಾಗಿ ಕಸಿದುಕೊಂಡಿವೆ. ಈ ಕಾರ್ಮಿಕ ವಿರೋಧಿ ನೀತಿಗಳನ್ನು ಇಂಡಿಯಾ ಲೇಬರ್ ಲೈನ್ ತೀವ್ರವಾಗಿ ಖಂಡಿಸಿದೆ.

ಈ ಹೊಸ ಸಂಹಿತೆಗಳ ಪರಿಣಾಮವಾಗಿ ವಿಶೇಷವಾಗಿ ವಲಸೆ ಕಾರ್ಮಿಕರು, ಮಹಿಳಾ ಕಾರ್ಮಿಕರು ಹಾಗೂ ಅಸಂಘಟಿತ ಕ್ಷೇತ್ರದ ಶ್ರಮಿಕರು ತೀವ್ರ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಉದ್ಯೋಗ ಭದ್ರತೆ ಕಸಿತ, ಕೂಲಿ ವಂಚನೆ, ಅಕ್ರಮ ವಜಾ ಹಾಗೂ ಸಾಮಾಜಿಕ ರಕ್ಷಣೆಯ ಕೊರತೆ ಕಾರ್ಮಿಕರ ಬದುಕನ್ನು ಮತ್ತಷ್ಟು ಅಸ್ಥಿರಗೊಳಿಸುತ್ತಿದೆ.

ಇಂಡಿಯಾ ಲೇಬರ್ ಲೈನ್ ಕಳೆದ ಐದು ವರ್ಷಗಳಿಂದ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ಕೆಲಸ ಮಾಡುತ್ತಿರುವ ಸಾವಿರಾರು ಕಾರ್ಮಿಕರ ವೇತನ ಹಾಗೂ ಕಾರ್ಮಿಕ ಕಾನೂನು ಸಂಬಂಧಿತ ವಿವಾದಗಳನ್ನು ಸೌಹಾರ್ದಯುತವಾಗಿ ಬಗೆಹರಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತಿದೆ. ಈ ಅವಧಿಯಲ್ಲಿ ಸಂಸ್ಥೆಯು ಒಟ್ಟಾರೆ 19,855 ಪ್ರಕರಣಗಳನ್ನು ಸ್ವೀಕರಿಸಿ, ಅವುಗಳಲ್ಲಿ 8,436 ಪ್ರಕರಣಗಳನ್ನು ಯಶಸ್ವಿಯಾಗಿ ಪರಿಹರಿಸಿದೆ. ಇದರ ಪರಿಣಾಮವಾಗಿ ಕಾರ್ಮಿಕರಿಗೆ ಒಟ್ಟಾರೆ ರೂ. 18.95 ಕೋಟಿ ಪರಿಹಾರ ದೊರೆತಿದೆ.

ಇಂಡಿಯಾ ಲೇಬರ್ ಲೈನ್ ಕಾನೂನು ಸಲಹೆ, ಮಧ್ಯಸ್ಥಿಕೆ ಹಾಗೂ ಕಾರ್ಮಿಕರ ಹಕ್ಕುಗಳ ಸಂರಕ್ಷಣೆಯ ಮೂಲಕ ನಿರಂತರವಾಗಿ ಬೆಂಬಲ ಒದಗಿಸುತ್ತಿದ್ದು, ಶ್ರಮಿಕರ ನ್ಯಾಯಸಾಧನೆಗೆ ಮಹತ್ವದ ಕೊಡುಗೆ ನೀಡುತ್ತಿದೆ.

ಸರ್ಕಾರದ ಹೊಸ ಆರ್ಥಿಕ ನೀತಿಗಳು ಹಾಗೂ ಕಾರ್ಮಿಕ ಕ್ಷೇತ್ರದಲ್ಲಿ ಎದುರಾಗುತ್ತಿರುವ ಸವಾಲುಗಳ ನಡುವೆಯೂ ಇಂಡಿಯಾ ಲೇಬರ್ ಲೈನ್ ಸಂಸ್ಥೆ ಶ್ರಮಿಕರ ಹಕ್ಕುಗಳ ರಕ್ಷಣೆಗೆ ನಿರಂತರವಾಗಿ ಬದ್ಧವಾಗಿದೆ. ಸಂಘಟಿತ ಹಾಗೂ ಅಸಂಘಟಿತ ಕ್ಷೇತ್ರದ ಕಾರ್ಮಿಕರಿಗೆ ನ್ಯಾಯ ದೊರಕಿಸುವ ಉದ್ದೇಶದಿಂದ ಸಂಸ್ಥೆಯು ಮುಂದುವರಿದು ತನ್ನ ಸೇವೆಗಳನ್ನು ಇನ್ನಷ್ಟು ವಿಸ್ತರಿಸಲಿದೆ.

ಇದನ್ನೂ ಓದಿ | ‘ಗ್ಯಾರಂಟಿ’ ಭಾರ, ಅಭಿವೃದ್ಧಿ ದೂರ: ರಾಜ್ಯ ಸರ್ಕಾರದ ಆಡಳಿತ ವೈಫಲ್ಯಕ್ಕೆ ಹಿಡಿದ ಕನ್ನಡಿ!

ಈ ಹಿನ್ನಲೆಯಲ್ಲಿ, ಕಾರ್ಮಿಕ ವಿರೋಧಿ ನಾಲ್ಕು ಸಂಹಿತೆಗಳನ್ನು ತಕ್ಷಣ ಹಿಂಪಡೆಯಬೇಕು ಹಾಗೂ ಕಾರ್ಮಿಕ ಸಂಘಟನೆಗಳು, ನಾಗರಿಕ ಸಮಾಜ ಮತ್ತು ತಜ್ಞರೊಂದಿಗೆ ವ್ಯಾಪಕ ಸಮಾಲೋಚನೆ ನಡೆಸಬೇಕೆಂದು ಇಂಡಿಯಾ ಲೇಬರ್ ಲೈನ್ ಕೇಂದ್ರ ಸರ್ಕಾರವನ್ನು ಆಗ್ರಹಿಸುತ್ತದೆ. ಜೊತೆಗೆ, ಕಾರ್ಮಿಕರ ಹಕ್ಕುಗಳ ರಕ್ಷಣೆಗೆ ನಾಗರಿಕರು, ಕಾರ್ಮಿಕ ಸಂಘಟನೆಗಳು ಮತ್ತು ಮಾಧ್ಯಮಗಳು ಒಟ್ಟಾಗಿ ಧ್ವನಿ ಎತ್ತಬೇಕೆಂದು ಸಂಸ್ಥೆ ಮನವಿ ಮಾಡುತ್ತದೆ.

ಕೂಲಿ ವಂಚನೆ, ಅಕ್ರಮ ವಜಾ ಅಥವಾ ಕೆಲಸದ ಸ್ಥಳದಲ್ಲಿ ಕಿರುಕುಳವನ್ನು ಎದುರಿಸುತ್ತಿರುವ ಕಾರ್ಮಿಕರು ಉಚಿತ ಸಹಾಯಕ್ಕಾಗಿ ತಕ್ಷಣವೇ 1-800-833-9020 ಸಂಖ್ಯೆಗೆ ಕರೆ ಮಾಡುವಂತೆ ಇಂಡಿಯಾ ಲೇಬರ್ ಲೈನ್ ಮನವಿ ಮಾಡುತ್ತದೆ.

Share:

ಮತ್ತಷ್ಟು ಸುದ್ದಿ

ಪಾಂಡವಪುರದ ಕ್ಯಾತನಹಳ್ಳಿಯಲ್ಲಿ ರಾಜ್ಯಮಟ್ಟದ ‘ಅಧಿಕ ಹಾಲು ಕರೆಯುವ ಸ್ಪರ್ಧೆ’

ಶಾಸಕ ದರ್ಶನ್ ಪುಟ್ಟಣ್ಣಯ್ಯ ಹುಟ್ಟುಹಬ್ಬ ಮಂಡ್ಯ: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ಜನ್ಮದಿನದ ಪ್ರಯುಕ್ತ ಮಂಡ್ಯ

ಸಾವಯವ ಉತ್ಪನ್ನಗಳ ಗ್ರಾಹಕರೇ ಬೆಂಗಳೂರಿನ ಲಾಲ್‌ ಬಾಗ್‌ ಗೆ ಬನ್ನಿ

ಜೈವಿಕ ಕೃಷಿಕ ಸೊಸೈಟಿ (ರಿ)ಯಿಂದ ಕೃಷಿ ಉತ್ಪನ್ನಗಳ ನೇರ ಮಾರುಕಟ್ಟೆ  ಬೆಂಗಳೂರು: ಜೈವಿಕ ಕೃಷಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಜೈವಿಕ

ಮುಂದೆ ಓದಿ »

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್.ಪಾಟೀಲ್‌ ರಾಜೀನಾಮೆ

ಬೆಂಗಳೂರು: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ದಿನಾಂಕ 05.06.2026ರಂದು ರಾಜೀನಾಮೆ ಸಲ್ಲಿಸಿದ್ದೇನೆ ಎಂದು

ಮುಂದೆ ಓದಿ »

ರೈತರ ತೆಂಗಿನ ತೋಟಗಳಿಗೆ ಆಸರೆಯಾದ ಪುಟ್ಟಣ್ಣಯ್ಯ ಫೌಂಡೇಶನ್

ಬನ್ನಂಗಾಡಿ ಗ್ರಾ.ಪಂನಲ್ಲಿ ಕೀಟ ನಿರ್ವಹಣೆ ಜಾಗೃತಿ ಮತ್ತು ಪ್ರಾತ್ಯಕ್ಷಿಕೆ! ಮಂಡ್ಯ: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ

ಮುಂದೆ ಓದಿ »