ಜುಲೈ 14 ರಿಂದ ಕಾವೇರಿ ನಾಲೆಗಳಿಗೆ ನೀರು ಬಿಡುವವರೆಗೂ ರೈತ ಸಂಘದಿಂದ ಅಹೋರಾತ್ರಿ ಧರಣಿ!

ಒಣಗುತ್ತಿರುವ ಬೆಳೆ ರಕ್ಷಣೆಗೆ ಆಗ್ರಹ

ಮಂಡ್ಯ: ಜಿಲ್ಲೆಯಲ್ಲಿ ಒಣಗುತ್ತಿರುವ ಬೆಳೆಗಳಿಗೆ ತಕ್ಷಣವೇ ಕಾವೇರಿ ಅಚ್ಚುಕಟ್ಟು ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಬೃಹತ್ ಹೋರಾಟಕ್ಕೆ ಕರೆ ನೀಡಲಾಗಿದೆ. ಜುಲೈ 14, 2026ರ ಮಂಗಳವಾರದಂದು ಬೆಳಿಗ್ಗೆ 11 ಗಂಟೆಯಿಂದ ಕೆ.ಆರ್.ಎಸ್. ಕಾರ್ಯಪಾಲಕ ಅಭಿಯಂತರರ ಕಛೇರಿ ಮುಂದೆ ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ.

ನೀರು ಬಿಡುವವರೆಗೂ ನಿಲ್ಲಲ್ಲ ಹೋರಾಟ!: ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಕರ್ನಾಟಕ ರಾಜ್ಯ ರೈತ ಸಂಘದ ಮಂಡ್ಯ ಜಿಲ್ಲಾಧ್ಯಕ್ಷರಾದ ಕೆಂಪುಗೌಡ ಅವರು, ಜಿಲ್ಲೆಯಲ್ಲಿ ಸಕಾಲಕ್ಕೆ ನೀರಿಲ್ಲದೆ ರೈತರ ಬೆಳೆಗಳು ಕಣ್ಣೆದುರೇ ಒಣಗುತ್ತಿವೆ. ರೈತರ ಹಿತರಕ್ಷಣೆಗಾಗಿ ತಕ್ಷಣವೇ ಕಾವೇರಿ ನಾಲೆಗಳಿಗೆ ನೀರು ಹರಿಸಬೇಕು. ಅಲ್ಲಿಯವರೆಗೆ ನಮ್ಮ ಪ್ರತಿಭಟನೆ ನಿಲ್ಲುವುದಿಲ್ಲ. ಅಧಿಕಾರಿಗಳು ನಾಲೆಗಳಿಗೆ ನೀರು ಬಿಡುವವರೆಗೂ ಈ ಅಹೋರಾತ್ರಿ ಧರಣಿ ಸತ್ಯಾಗ್ರಹ ನಿರಂತರವಾಗಿ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವ: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ ಹಾಗೂ ರೈತ ಸಂಘದ ಪ್ರಮುಖರ ನೇತೃತ್ವದಲ್ಲಿ ಈ ಬೃಹತ್ ಧರಣಿ ಸತ್ಯಾಗ್ರಹ ಆಯೋಜನೆಗೊಂಡಿದ್ದು, ಕಾವೇರಿ ಅಚ್ಚುಕಟ್ಟು ಪ್ರದೇಶದ ರೈತರ ಧ್ವನಿಯಾಗಿ ಈ ಹೋರಾಟ ತೀವ್ರಗೊಳ್ಳುವ ಮುನ್ಸೂಚನೆ ಸಿಕ್ಕಿದೆ.

ಪಕ್ಷತೀತವಾಗಿ ಭಾಗವಹಿಸಲು ರೈತರಿಗೆ ಕರೆ: ಇದು ಕೇವಲ ಒಂದು ಸಂಘಟನೆಯ ಹೋರಾಟವಲ್ಲ, ಇದು ಇಡೀ ಜಿಲ್ಲೆಯ ಅನ್ನದಾತರ ಬದುಕಿನ ಪ್ರಶ್ನೆ. ಒಣಗುತ್ತಿರುವ ಬೆಳೆಗಳನ್ನು ಉಳಿಸಿಕೊಳ್ಳಲು ಪ್ರತಿಯೊಬ್ಬ ರೈತನೂ ಎದ್ದು ನಿಲ್ಲಬೇಕಿದೆ. ಆದ್ದರಿಂದ ಜಿಲ್ಲೆಯ ಎಲ್ಲಾ ರೈತ ಬಾಂಧವರು ಯಾವುದೇ ರಾಜಕೀಯ ಪಕ್ಷದ ಭೇದ-ಭಾವವಿಲ್ಲದೆ, ಪಕ್ಷತೀತವಾಗಿ ಈ ಅಹೋರಾತ್ರಿ ಧರಣಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಮನವಿ ಮಾಡಿದೆ.

ಬೆಳೆ ಒಣಗಿ ಸಂಕಷ್ಟದಲ್ಲಿರುವ ಮಂಡ್ಯ ಜಿಲ್ಲೆಯ ರೈತ ಸಮುದಾಯಕ್ಕೆ ನ್ಯಾಯ ಸಿಗುತ್ತಾ? ಅಧಿಕಾರಿಗಳು ಧರಣಿಗೆ ಹೆದರಿ ನೀರು ಹರಿಸುತ್ತಾರಾ? ಎಂಬುದನ್ನು ಕಾದು ನೋಡಬೇಕಿದೆ.

ಧರಣಿಯ ವಿವರಗಳು:

ದಿನಾಂಕ: 14.07.2026, ಮಂಗಳವಾರ

ಸಮಯ: ಬೆಳಿಗ್ಗೆ 11 ಗಂಟೆಯಿಂದ (ನೀರು ಬಿಡುವವರೆಗೂ ಅಹೋರಾತ್ರಿ ಧರಣಿ)

ಸ್ಥಳ: ಕೆ.ಆರ್.ಎಸ್. ಕಾರ್ಯಪಾಲಕ ಅಭಿಯಂತರರ ಕಛೇರಿ ಮುಂದೆ

Share:

ಮತ್ತಷ್ಟು ಸುದ್ದಿ

ಪಾಂಡವಪುರದ ಕ್ಯಾತನಹಳ್ಳಿಯಲ್ಲಿ ರಾಜ್ಯಮಟ್ಟದ ‘ಅಧಿಕ ಹಾಲು ಕರೆಯುವ ಸ್ಪರ್ಧೆ’

ಶಾಸಕ ದರ್ಶನ್ ಪುಟ್ಟಣ್ಣಯ್ಯ ಹುಟ್ಟುಹಬ್ಬ ಮಂಡ್ಯ: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ಜನ್ಮದಿನದ ಪ್ರಯುಕ್ತ ಮಂಡ್ಯ

ಸಾವಯವ ಉತ್ಪನ್ನಗಳ ಗ್ರಾಹಕರೇ ಬೆಂಗಳೂರಿನ ಲಾಲ್‌ ಬಾಗ್‌ ಗೆ ಬನ್ನಿ

ಜೈವಿಕ ಕೃಷಿಕ ಸೊಸೈಟಿ (ರಿ)ಯಿಂದ ಕೃಷಿ ಉತ್ಪನ್ನಗಳ ನೇರ ಮಾರುಕಟ್ಟೆ  ಬೆಂಗಳೂರು: ಜೈವಿಕ ಕೃಷಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಜೈವಿಕ

ಮುಂದೆ ಓದಿ »

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್.ಪಾಟೀಲ್‌ ರಾಜೀನಾಮೆ

ಬೆಂಗಳೂರು: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ದಿನಾಂಕ 05.06.2026ರಂದು ರಾಜೀನಾಮೆ ಸಲ್ಲಿಸಿದ್ದೇನೆ ಎಂದು

ಮುಂದೆ ಓದಿ »

ರೈತರ ತೆಂಗಿನ ತೋಟಗಳಿಗೆ ಆಸರೆಯಾದ ಪುಟ್ಟಣ್ಣಯ್ಯ ಫೌಂಡೇಶನ್

ಬನ್ನಂಗಾಡಿ ಗ್ರಾ.ಪಂನಲ್ಲಿ ಕೀಟ ನಿರ್ವಹಣೆ ಜಾಗೃತಿ ಮತ್ತು ಪ್ರಾತ್ಯಕ್ಷಿಕೆ! ಮಂಡ್ಯ: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ

ಮುಂದೆ ಓದಿ »