ಟಿಎಂಸಿ ಸಂಸದೆಯ ಅಮಿತ್ ಶಾ ವಿರುದ್ಧ ವಿವಾದಾತ್ಮಕ ಹೇಳೀಕೆ

ಗಡಿಗಳನ್ನು ರಕ್ಷಿಸಲು ಸಾಧ್ಯವಾಗದಿದ್ದರೆ, ಅಮಿತ್ ಶಾ ಅವರ ತಲೆಯನ್ನು ಕತ್ತರಿಸಿ ಮೇಜಿನ ಮೇಲೆ ಇರಿಸಬೇಕು" ಎಂದು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಹೇಳಿದ್ದಾರೆ.
mahua moitra amit shah

ಆಗಸ್ಟ್ 29ರಂದು ಪಶ್ಚಿಮ ಬಂಗಾಳದ ನದಿಯಾ ಜಿಲ್ಲೆಯ ಕೃಷ್ಣನಗರದಲ್ಲಿ ಮಾತನಾಡಿದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬಂಗಾಳಿ ಭಾಷೆಯಲ್ಲಿ ಮಾತನಾಡಿದ ಅವರು, “ಗಡಿಗಳನ್ನು ರಕ್ಷಿಸಲು ಸಾಧ್ಯವಾಗದಿದ್ದರೆ, ಅಮಿತ್ ಶಾ ಅವರ ತಲೆಯನ್ನು ಕತ್ತರಿಸಿ ಮೇಜಿನ ಮೇಲೆ ಇರಿಸಬೇಕು” ಎಂದು ಹೇಳಿದರು. ಇದು ಬಾಂಗ್ಲಾದೇಶದಿಂದ ಒಳನುಸುಳುವಿಕೆಯನ್ನು ತಡೆಯಲು ವಿಫಲವಾದ ಸರ್ಕಾರದ ವಿರುದ್ಧದ ಆಕ್ರೋಶವಾಗಿತ್ತು. “ಬಿಎಸ್‌ಎಫ್ ಮತ್ತು ಕೇಂದ್ರ ಸರ್ಕಾರದ ಅಧೀನದಲ್ಲಿ ಗಡಿ ರಕ್ಷಣೆ ಇದ್ದರೂ, ಪ್ರತಿದಿನ ನೂರಾರು ಒಳನುಸುಳುಕೋರರು ಬರುತ್ತಿದ್ದಾರೆ. ಅವರು ನಮ್ಮ ತಾಯಂದಿರು ಮತ್ತು ಸಹೋದರಿಯರ ಮೇಲೆ ಕಣ್ಣಿಟ್ಟು, ಭೂಮಿಯನ್ನು ಕಸಿದುಕೊಳ್ಳುತ್ತಿದ್ದಾರೆ” ಎಂದು ಮೊಯಿತ್ರಾ ಆರೋಪಿಸಿದರು.

ಇದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿ, ಮೊಯಿತ್ರಾ ಅವರ ಹೇಳಿಕೆಯನ್ನು “ದ್ವೇಷದ ಭಾಷಣ” ಮತ್ತು “ಅಸಹ್ಯಕರ” ಎಂದು ಕರೆದಿದ್ದಾರೆ. ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್, “ಇದು ಟಿಎಂಸಿಯ ಹತಾಶೆ ಮತ್ತು ಬಂಗಾಳದ ಪ್ರತಿಷ್ಠೆಯನ್ನು ಹಾಳುಮಾಡುವ ಸಂಸ್ಕೃತಿ” ಎಂದು ಟೀಕಿಸಿದರು. ಬಿಜೆಪಿ ನಾಯಕ ಅಮಿತ್ ಮಾಲ್ವಿಯಾ, ಇದು ಟಿಎಂಸಿಯ ಹಿಂಸಾತ್ಮಕ ಮನಸ್ಥಿತಿಯನ್ನು ಬಹಿರಂಗಪಡಿಸುತ್ತದೆ ಎಂದರು. ಬಿಜೆಪಿ ಕೃಷ್ಣನಗರದ ಕೋಟ್ವಾಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಮೊಯಿತ್ರಾ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ | ಸಂಭಾಲಾ ಹಿಂಸಾಚಾರ ತನಿಖೆ: ಹಿಂದೂ ಜನಸಂಖ್ಯೆ 45% ರಿಂದ 15%ಕ್ಕೆ ಇಳಿಕೆ

ಮೊಯಿತ್ರಾ ತಮ್ಮ ಹೇಳಿಕೆಯನ್ನು ರೂಪಕಾತ್ಮಕ ಎಂದು ಸಮರ್ಥಿಸಿಕೊಂಡರು, ಆದರೆ ಬಿಜೆಪಿ ಅದನ್ನು ಹಿಂಸಾತ್ಮಕ ಭಾಷಣ ಎಂದು ಖಂಡಿಸಿದೆ. ಈ ಘಟನೆ ಟಿಎಂಸಿ ಮತ್ತು ಬಿಜೆಪಿ ನಡುವಿನ ರಾಜಕೀಯ ಘರ್ಷಣೆಯನ್ನು ತೀವ್ರಗೊಳಿಸಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಬಿಜೆಪಿ ನಾಯಕರು ಮಮತಾ ಬ್ಯಾನರ್ಜಿ ಅವರನ್ನು ಟೀಕಿಸಿ, ಟಿಎಂಸಿಯ ಈ ಮನಸ್ಥಿತಿ ಬಂಗಾಳದಲ್ಲಿ ಹಿಂಸೆಯನ್ನು ಉತ್ತೇಜಿಸುತ್ತದೆ ಎಂದು ಆರೋಪಿಸಿದರು. ಈ ವಿವಾದ ಗಡಿ ಭದ್ರತೆ ಮತ್ತು ರಾಜಕೀಯ ಭಾಷಣದ ಮಿತಿಗಳ ಬಗ್ಗೆ ಹೊಸ ಚರ್ಚೆಗೆ ದಾರಿ ಮಾಡಿಕೊಟ್ಟಿದೆ.

Share:

ಮತ್ತಷ್ಟು ಸುದ್ದಿ

ಪಾಂಡವಪುರದ ಕ್ಯಾತನಹಳ್ಳಿಯಲ್ಲಿ ರಾಜ್ಯಮಟ್ಟದ ‘ಅಧಿಕ ಹಾಲು ಕರೆಯುವ ಸ್ಪರ್ಧೆ’

ಶಾಸಕ ದರ್ಶನ್ ಪುಟ್ಟಣ್ಣಯ್ಯ ಹುಟ್ಟುಹಬ್ಬ ಮಂಡ್ಯ: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ಜನ್ಮದಿನದ ಪ್ರಯುಕ್ತ ಮಂಡ್ಯ

ಸಾವಯವ ಉತ್ಪನ್ನಗಳ ಗ್ರಾಹಕರೇ ಬೆಂಗಳೂರಿನ ಲಾಲ್‌ ಬಾಗ್‌ ಗೆ ಬನ್ನಿ

ಜೈವಿಕ ಕೃಷಿಕ ಸೊಸೈಟಿ (ರಿ)ಯಿಂದ ಕೃಷಿ ಉತ್ಪನ್ನಗಳ ನೇರ ಮಾರುಕಟ್ಟೆ  ಬೆಂಗಳೂರು: ಜೈವಿಕ ಕೃಷಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಜೈವಿಕ

ಮುಂದೆ ಓದಿ »

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್.ಪಾಟೀಲ್‌ ರಾಜೀನಾಮೆ

ಬೆಂಗಳೂರು: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ದಿನಾಂಕ 05.06.2026ರಂದು ರಾಜೀನಾಮೆ ಸಲ್ಲಿಸಿದ್ದೇನೆ ಎಂದು

ಮುಂದೆ ಓದಿ »

ರೈತರ ತೆಂಗಿನ ತೋಟಗಳಿಗೆ ಆಸರೆಯಾದ ಪುಟ್ಟಣ್ಣಯ್ಯ ಫೌಂಡೇಶನ್

ಬನ್ನಂಗಾಡಿ ಗ್ರಾ.ಪಂನಲ್ಲಿ ಕೀಟ ನಿರ್ವಹಣೆ ಜಾಗೃತಿ ಮತ್ತು ಪ್ರಾತ್ಯಕ್ಷಿಕೆ! ಮಂಡ್ಯ: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ

ಮುಂದೆ ಓದಿ »