ಪ್ರಧಾನಿ ಮೋದಿ ಇಂದು ನಾಲ್ ವಾಯುನೆಲೆಗೆ ಭೇಟಿ

ಪಾಕಿಸ್ತಾನದ ಗಡಿಯಿಂದ ಕೇವಲ 150 ಕಿಲೋಮೀಟರ್‌‌ ದೂರದಲ್ಲಿರುವ ರಾಜಸ್ಥಾನದ ಬಿಕನೇರ್‌ನ ನಾಲ್ ವಾಯುನೆಲೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ ನೀಡಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ (PM Modi) ಗುರುವಾರ (ಮೇ 22) ರಾಜಸ್ಥಾನದ ಬಿಕನೇರ್‌ನಲ್ಲಿರುವ ನಾಲ್ (Nal) ವಾಯುನೆಲೆಗೆ ಭೇಟಿ ನೀಡಲಿದ್ದಾರೆ. ಈ ವಾಯುನೆಲೆ ಪಾಕಿಸ್ತಾನದ ಗಡಿಯಿಂದ ಕೇವಲ 150 ಕಿಲೋಮೀಟರ್‌ಗಳ ದೂರದಲ್ಲಿದೆ.  ಆಪರೇಷನ್ ಸಿಂಧೂರ (Operation Sindoor) ನಡೆಸಿದ ನಂತರ, ಪಾಕಿಸ್ತಾನದ ಡ್ರೋನ್ ದಾಳಿಗೆ ಗುರಿಯಾಗಿದ್ದ ನಾಲ್ ವಾಯುನೆಲೆಗೆ ಪ್ರಧಾನಿಯ ಈ ಭೇಟಿ ವಿಶೇಷ ಮಹತ್ವವನ್ನು ಹೊಂದಿದೆ.  

ಅಮೃತ ಭಾರತ ನಿಲ್ದಾಣ ಯೋಜನೆಯಡಿಯಲ್ಲಿ ನವೀಕರಿಸಲಾದ ದೇಶ್ನೋಕ್ ರೈಲ್ವೇ ನಿಲ್ದಾಣವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಇದರ ಜೊತೆಗೆ, ಬಿಕನೇರ್-ಮುಂಬೈ ಎಕ್ಸ್‌ಪ್ರೆಸ್‌ ರೈಲು ಸೇವೆಗೆ ಹಸಿರು ನಿಶಾನೆ ನೀಡಲಿದ್ದಾರೆ.    

ಪ್ರಧಾನಿ ಮೋದಿ ಬಿಕನೇರ್‌ನಲ್ಲಿ 26,000 ಕೋಟಿ ರೂಪಾಯಿಗಳಿಗೂ ಅಧಿಕ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ. 

  ನಂತರ, ಪ್ರಧಾನಿ ಮೋದಿ ದೇಶ್ನೋಕ್‌ನಲ್ಲಿರುವ ಪ್ರಸಿದ್ಧ ಕರ್ಣಿ ಮಾತಾ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆಯಲಿದ್ದಾರೆ. ಈ ದೇವಾಲಯವು ರಾಜಸ್ಥಾನದ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಒಂದಾಗಿದೆ.  

ಇದಕ್ಕೂ ಮುಂಚೆ, ಪ್ರಧಾನಿ ಮೋದಿ ಆದಮ್‌ಪುರ ವಾಯುನೆಲೆಗೆ ಭೇಟಿ ನೀಡಿ, ವಾಯುಪಡೆಯ ಸಿಬ್ಬಂದಿಗಳನ್ನು ಉದ್ದೇಶಿಸಿ ಪ್ರೇರಣಾತ್ಮಕ ಭಾಷಣ ಮಾಡಿದ್ದರು. ಭಾರತದ ರಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವ ಬಗ್ಗೆ ಅವರು ಮಾತನಾಡಿದ್ದರು. 

Share:

ಮತ್ತಷ್ಟು ಸುದ್ದಿ

ಪಾಂಡವಪುರದ ಕ್ಯಾತನಹಳ್ಳಿಯಲ್ಲಿ ರಾಜ್ಯಮಟ್ಟದ ‘ಅಧಿಕ ಹಾಲು ಕರೆಯುವ ಸ್ಪರ್ಧೆ’

ಶಾಸಕ ದರ್ಶನ್ ಪುಟ್ಟಣ್ಣಯ್ಯ ಹುಟ್ಟುಹಬ್ಬ ಮಂಡ್ಯ: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ಜನ್ಮದಿನದ ಪ್ರಯುಕ್ತ ಮಂಡ್ಯ

ಸಾವಯವ ಉತ್ಪನ್ನಗಳ ಗ್ರಾಹಕರೇ ಬೆಂಗಳೂರಿನ ಲಾಲ್‌ ಬಾಗ್‌ ಗೆ ಬನ್ನಿ

ಜೈವಿಕ ಕೃಷಿಕ ಸೊಸೈಟಿ (ರಿ)ಯಿಂದ ಕೃಷಿ ಉತ್ಪನ್ನಗಳ ನೇರ ಮಾರುಕಟ್ಟೆ  ಬೆಂಗಳೂರು: ಜೈವಿಕ ಕೃಷಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಜೈವಿಕ

ಮುಂದೆ ಓದಿ »

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್.ಪಾಟೀಲ್‌ ರಾಜೀನಾಮೆ

ಬೆಂಗಳೂರು: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ದಿನಾಂಕ 05.06.2026ರಂದು ರಾಜೀನಾಮೆ ಸಲ್ಲಿಸಿದ್ದೇನೆ ಎಂದು

ಮುಂದೆ ಓದಿ »

ರೈತರ ತೆಂಗಿನ ತೋಟಗಳಿಗೆ ಆಸರೆಯಾದ ಪುಟ್ಟಣ್ಣಯ್ಯ ಫೌಂಡೇಶನ್

ಬನ್ನಂಗಾಡಿ ಗ್ರಾ.ಪಂನಲ್ಲಿ ಕೀಟ ನಿರ್ವಹಣೆ ಜಾಗೃತಿ ಮತ್ತು ಪ್ರಾತ್ಯಕ್ಷಿಕೆ! ಮಂಡ್ಯ: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ

ಮುಂದೆ ಓದಿ »