ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಸಿಎಂ ಸಿದ್ದರಾಮಯ್ಯ

ಕರ್ನಾಟಕದ ಕಾಂಗ್ರೆಸ್ ಸರ್ಕಾರ ಐದು ವರ್ಷಗಳ ಕಾಲ ಬಂಡೆಯಂತೆ ಭದ್ರವಾಗಿರುತ್ತದೆ ಹಾಗೆಯೇ ತಾನು ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಒಗ್ಗಟ್ಟಾಗಿದ್ದು, ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.
Siddaramaiah Meets Gehlot

ಮೈಸೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರ ಐದು ವರ್ಷಗಳ ಕಾಲ ಬಂಡೆಯಂತೆ ಭದ್ರವಾಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೃಢವಾಗಿ ಹೇಳಿದ್ದಾರೆ. ತಾನು ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಒಗ್ಗಟ್ಟಾಗಿದ್ದು, ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ವಿರೋಧಿಗಳ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಮೈಸೂರು ವಿಮಾನನಿಲ್ದಾಣದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿಯವರ ಸುಳ್ಳು ಆರೋಪಗಳನ್ನು ತಿರಸ್ಕರಿಸಿದರು ಮತ್ತು ರಾಜ್ಯ ಕಾಂಗ್ರೆಸ್‌ನ ಒಗ್ಗಟ್ಟಿನ ಬಗ್ಗೆ ದೃಢವಾದ ಸಂದೇಶವನ್ನು ನೀಡಿದರು.

ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಭಿನ್ನಾಭಿಪ್ರಾಯಗಳಿವೆ ಎಂಬ ಬಿಜೆಪಿಯ ಆರೋಪವನ್ನು ಖಂಡಿಸಿದ ಸಿಎಂ, “ನಾವಿಬ್ಬರೂ ಒಗ್ಗಟ್ಟಾಗಿದ್ದೇವೆ. ಯಾರೇ ಏನೇ ಹೇಳಿದರೂ, ನಮ್ಮ ಸರ್ಕಾರದ ಸ್ಥಿರತೆಗೆ ಯಾವುದೇ ಧಕ್ಕೆ ಇಲ್ಲ. ಕಾಂಗ್ರೆಸ್ ಶಾಸಕರೆಲ್ಲರೂ ಒಟ್ಟಿಗೆ ಇದ್ದೇವೆ,” ಎಂದಿದ್ದಾರೆ.  

ರಾಜ್ಯ ಕಾಂಗ್ರೆಸ್‌ನ ಉಸ್ತುವಾರಿ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರ ರಾಜ್ಯ ಭೇಟಿಯ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, “ಸುರ್ಜೆವಾಲಾ ಅವರು ಶಾಸಕರ ಮತ್ತು ಕಾರ್ಯಕರ್ತರ ಅಭಿಪ್ರಾಯಗಳನ್ನು ಕೇಳಿ, ಪಕ್ಷದ ಕಾರ್ಯತಂತ್ರವನ್ನು ಬಲಪಡಿಸುವ ಕೆಲಸ ಮಾಡುತ್ತಾರೆ. ಇದು ಎಐಸಿಸಿಯ ರಾಜ್ಯ ಘಟಕದೊಂದಿಗೆ ಸಮಾಲೋಚನೆಯ ಭಾಗವಾಗಿದೆ,” ಎಂದರು.  

ಬಿಜೆಪಿಯವರಿಂದ ಸಿದ್ದರಾಮಯ್ಯ ಈ ಬಾರಿಯ ದಸರಾ ಉದ್ಘಾಟನೆಯನ್ನು ನಡೆಸುವುದಿಲ್ಲ ಎಂಬ ಆರೋಪಕ್ಕೆ ತಿರುಗೇಟು ನೀಡಿದ ಸಿಎಂ, “ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಶ್ರೀರಾಮುಲು ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಸೋತವರು. ಅವರು ಯಾವ ಮುಖದಿಂದ ಭವಿಷ್ಯ ನುಡಿಯುತ್ತಾರೆ?” ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು.  

Share:

ಮತ್ತಷ್ಟು ಸುದ್ದಿ

ಪಾಂಡವಪುರದ ಕ್ಯಾತನಹಳ್ಳಿಯಲ್ಲಿ ರಾಜ್ಯಮಟ್ಟದ ‘ಅಧಿಕ ಹಾಲು ಕರೆಯುವ ಸ್ಪರ್ಧೆ’

ಶಾಸಕ ದರ್ಶನ್ ಪುಟ್ಟಣ್ಣಯ್ಯ ಹುಟ್ಟುಹಬ್ಬ ಮಂಡ್ಯ: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ಜನ್ಮದಿನದ ಪ್ರಯುಕ್ತ ಮಂಡ್ಯ

ಸಾವಯವ ಉತ್ಪನ್ನಗಳ ಗ್ರಾಹಕರೇ ಬೆಂಗಳೂರಿನ ಲಾಲ್‌ ಬಾಗ್‌ ಗೆ ಬನ್ನಿ

ಜೈವಿಕ ಕೃಷಿಕ ಸೊಸೈಟಿ (ರಿ)ಯಿಂದ ಕೃಷಿ ಉತ್ಪನ್ನಗಳ ನೇರ ಮಾರುಕಟ್ಟೆ  ಬೆಂಗಳೂರು: ಜೈವಿಕ ಕೃಷಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಜೈವಿಕ

ಮುಂದೆ ಓದಿ »

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್.ಪಾಟೀಲ್‌ ರಾಜೀನಾಮೆ

ಬೆಂಗಳೂರು: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ದಿನಾಂಕ 05.06.2026ರಂದು ರಾಜೀನಾಮೆ ಸಲ್ಲಿಸಿದ್ದೇನೆ ಎಂದು

ಮುಂದೆ ಓದಿ »

ರೈತರ ತೆಂಗಿನ ತೋಟಗಳಿಗೆ ಆಸರೆಯಾದ ಪುಟ್ಟಣ್ಣಯ್ಯ ಫೌಂಡೇಶನ್

ಬನ್ನಂಗಾಡಿ ಗ್ರಾ.ಪಂನಲ್ಲಿ ಕೀಟ ನಿರ್ವಹಣೆ ಜಾಗೃತಿ ಮತ್ತು ಪ್ರಾತ್ಯಕ್ಷಿಕೆ! ಮಂಡ್ಯ: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ

ಮುಂದೆ ಓದಿ »