ಶಾಸಕ ದರ್ಶನ್ ಪುಟ್ಟಣ್ಣಯ್ಯ ಹುಟ್ಟುಹಬ್ಬ
ಮಂಡ್ಯ: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ಜನ್ಮದಿನದ ಪ್ರಯುಕ್ತ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿಯಲ್ಲಿ ರಾಜ್ಯಮಟ್ಟದ ಬೃಹತ್ ಹಾಲು ಕರೆಯುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
“ಕಾಮಧೇನು ಕ್ಷೀರ ವೈಭವ – ಆಧುನಿಕ ಹೈನುಗಾರಿಕೆ ನಮ್ಮ ಹೆಮ್ಮೆ, ಗೋ ರಕ್ಷಣೆ ನಮ್ಮ ಹೊಣೆ” ಎಂಬ ಆಶಯದೊಂದಿಗೆ ‘ಕೆ.ಎಸ್.ಪುಟ್ಟಣ್ಣಯ್ಯ ಕ್ಷೀರಧಾರ ಪ್ರಥಮ ವರ್ಷದ ರಾಜ್ಯಮಟ್ಟದ ಅಧಿಕ ಹಾಲು ಕರೆಯುವ ಸ್ಪರ್ಧೆ’ ಅಕ್ಟೋಬರ್ 1 ಮತ್ತು 2 ರಂದು (ಗುರುವಾರ ಮತ್ತು ಶುಕ್ರವಾರ) ಕ್ಯಾತನಹಳ್ಳಿಯ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜರುಗಲಿದೆ.
ಕ್ಯಾತನಹಳ್ಳಿ ಗ್ರಾಮಸ್ಥರು, ಪಶುಪಾಲನಾ ಹಾಗೂ ಪಶುವೈದ್ಯಕೀಯ ಸೇವಾ ಇಲಾಖೆ ಮಂಡ್ಯ, ಕ್ಯಾತನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ಮತ್ತು ಪುಟ್ಟಣ್ಣಯ್ಯ ಫೌಂಡೇಶನ್ ಪಾಂಡವಪುರ ಇವರ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಆಕರ್ಷಕ ನಗದು ಬಹುಮಾನ:
ಸ್ಪರ್ಧೆಯಲ್ಲಿ ಅತಿ ಹೆಚ್ಚು ಹಾಲು ನೀಡುವ ಹಸುಗಳ ಮಾಲೀಕರಿಗೆ ನಗದು ಬಹುಮಾನಗಳನ್ನು ನಿಗದಿಪಡಿಸಲಾಗಿದೆ:
- ಪ್ರಥಮ ಬಹುಮಾನ: ₹75,549
- ದ್ವಿತೀಯ ಬಹುಮಾನ: ₹55,549
- ತೃತೀಯ ಬಹುಮಾನ: ₹25,549
- ನಾಲ್ಕನೇ ಬಹುಮಾನ: ₹15,549
ಸ್ಪರ್ಧೆಗೆ ನೋಂದಾಯಿಸಿಕೊಳ್ಳಲು ₹1977 ಪ್ರವೇಶ ಶುಲ್ಕ ನಿಗದಿಪಡಿಸಲಾಗಿದ್ದು, ಭಾಗವಹಿಸುವ ಎಲ್ಲಾ ಹಸುಗಳಿಗೂ ಪಶು ಆಹಾರ ಹಾಗೂ ಸಮಾಧಾನಕರ ಬಹುಮಾನವನ್ನು ವಿತರಿಸಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ. ರಾಜ್ಯದ ವಿವಿಧ ಭಾಗಗಳಿಂದ ಹೈನುಗಾರರು ಈ ಸ್ಪರ್ಧೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ಆಸಕ್ತರು ಹೆಚ್ಚಿನ ವಿವರಗಳಿಗೆ 7816809962, 9743445253, 9880328059, 6263975862, 8095590237 ಅಥವಾ 9916636836 ಸಂಖ್ಯೆಗಳನ್ನು ಸಂಪರ್ಕಿಸಬಹುದು.






